ಜೋಧ್ಪುರ (ರಾಜಸ್ಥಾನ): ಬೇನಾಮಿ ಆಸ್ತಿ ಪ್ರಕರಣ ಸಂಬಂಧ ರಾಬರ್ಟ್ ವಾದ್ರಾ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅನುಮತಿ ಕೋರಿ ಜಾರಿ ನಿರ್ದೇಶನಾಲಯ (ಇಡಿ) ರಾಜಸ್ಥಾನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪತಿಯಾಗಿರುವ ಉದ್ಯಮಿ ರಾಬರ್ಟ್ ವಾದ್ರಾರನ್ನು ಈಗಾಗಲೇ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಆದಾಯ ತೆರಿಗೆ ಇಲಾಖೆ (ಐಟಿ) ತನಿಖೆ ನಡೆಸುತ್ತಿದೆ. ಇದೀಗ ಸ್ಕೈಲೈಟ್ ಹಾಸ್ಪಿಟಾಲಿಟಿ ಪ್ರಕರಣ ಸಂಬಂಧ ಕಸ್ಟಡಿ ವಿಚಾರಣೆ ನಡೆಸಲು ಕೋರಿ ಇಡಿ ಸಲ್ಲಿಸಿರುವ ಅರ್ಜಿಯನ್ನು ಇಂದು ರಾಜಸ್ಥಾನ ಹೈಕೋರ್ಟ್ ವಿಚಾರಣೆ ನಡೆಸಲಿದೆ.