ಕರ್ನಾಟಕ

karnataka

ETV Bharat / bharat

ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ - ಬೆಂಗಳೂರಿನಿಂದ ಜೈಪುರಕ್ಕೆ ಪ್ರಯಾಣ ಬೆಳಸಿದ ವಿಮಾನದಲ್ಲಿ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ

ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ
ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

By

Published : Mar 17, 2021, 9:24 AM IST

Updated : Mar 17, 2021, 9:53 AM IST

09:18 March 17

ಗರ್ಭಿಣಿಯೊಬ್ಬರು ಬೆಂಗಳೂರಿನಿಂದ ಜೈಪುರಕ್ಕೆ ಪ್ರಯಾಣ ಮಾಡುತ್ತಿದ್ದ ವೇಳೆ ಮಗುವಿಗೆ ಜನ್ಮ ನೀಡಿದ್ದಾರೆ.

ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

ಜೈಪುರ (ರಾಜಸ್ತಾನ): ಸಾಮಾನ್ಯವಾಗಿ ತುಂಬು ಗರ್ಭಿಣಿಗೆ ಆಸ್ಪತ್ರೆ ಇಲ್ಲವೇ ಮನೆಯಲ್ಲೇ ಸುರಕ್ಷಿತ ಹೆರಿಗೆಗೆ ವ್ಯವಸ್ಥೆ ಮಾಡಲಾಗುತ್ತದೆ. ಆದರೆ, ಇಲ್ಲೊಂದು ವಿಭಿನ್ನ ಹೆರಿಗೆ ಮಾಡಿಸಲಾಗಿದೆ. ಹೌದು ಬೆಂಗಳೂರಿನಿಂದ ಜೈಪುರಕ್ಕೆ ಪ್ರಯಾಣ ಬೆಳೆಸಿದ್ದ ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ವಿಮಾನದಲ್ಲಿನ ವೈದ್ಯರು ಮಹಿಳೆಗೆ ಚಿಕಿತ್ಸೆ ನೀಡಿ ಸುರಕ್ಷಿತ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಇದೇ ಮೊದಲ ಬಾರಿಗೆ ಹಾರುವ ವಿಮಾನದಲ್ಲೇ ಮಹಿಳೆಗೆ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇಂದು ಬೆಳಗ್ಗೆ ಬೆಂಗಳೂರಿನಿಂದ ಜೈಪುರಕ್ಕೆ ವಿಮಾನ ತೆರಳುತ್ತಿತ್ತು. ಈ ವಿಮಾನದಲ್ಲಿ ತುಂಬು ಗರ್ಭಿಣಿಯೊಬ್ಬರು ಸಂಚಾರ ಮಾಡುತ್ತಿದ್ದರು. ಅವರಿಗೆ ಇದ್ದಕ್ಕಿದ್ದ ಹಾಗೇ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ವಿಮಾನದಲ್ಲಿದ್ದ ವೈದ್ಯರು ಅವರಿಗೆ ತಕ್ಷಣ ಆರೈಕೆ ಮಾಡಿ, ಸುರಕ್ಷಿತ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇನ್ನು ವಿಮಾನ ಜೈಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗುತ್ತಿದ್ದಂತೆ ಅವರನ್ನ ನೇರವಾಗಿ ಆಸ್ಪತ್ರೆಗೆ ರವಾನಿಸಲಾಯಿತು. ಇದೀಗ ತಾಯಿ ಮತ್ತು ಮಗು ಸುರಕ್ಷಿತವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Last Updated : Mar 17, 2021, 9:53 AM IST

ABOUT THE AUTHOR

...view details