ಕೋಟಾ (ರಾಜಸ್ಥಾನ):ರಾಜಸ್ಥಾನದ ಕೋಟಾ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಆಕ್ಸಿಜನ್ ಮಾಸ್ಕ್‌ಗೆ ಬೆಂಕಿ ತಗುಲಿ ರೋಗಿಯೊಬ್ಬರು ಸುಟ್ಟು ಕರಕಲಾದ ಘಟನೆ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯ ಎಂದು ಸಂಬಂಧಿಕರು ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಅಗ್ನಿ ಅವಘಡಕ್ಕೂ ಮುನ್ನವೇ ರೋಗಿಯು ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆ ಆಡಳಿತವು ಈ ಆರೋಪ ತಳ್ಳಿಹಾಕಿದೆ.
ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರೋಗಿ ಸಾವು:ಮೃತರನ್ನು ಅನಂತಪುರ ನಿವಾಸಿ ವೈಭವ್ ಶರ್ಮಾ ಎಂದು ಗುರುತಿಸಲಾಗಿದೆ. ನಾಲ್ಕೈದು ದಿನಗಳ ಹಿಂದೆ ಕರುಳು ಬಿರುಕು ಕಾಣಿಸಿಕೊಂಡಿದ್ದರಿಂದ ವೈಭವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ರೋಗಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ನಂತರ, ರೋಗಿಯನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಬುಧವಾರ ರಾತ್ರಿ 11.30ರ ಸುಮಾರಿಗೆ ರೋಗಿಯ ಆರೋಗ್ಯ ಹದಗೆಟ್ಟಿದೆ ಎಂದು ವೈಭವ್ ಸಂಬಂಧಿಕರು ತಿಳಿಸಿದ್ದಾರೆ.
ಇದನ್ನೂ ಓದಿ:ಗ್ರೇಟರ್ ನೋಯ್ಡಾದ ಗ್ಯಾಲಕ್ಸಿ ಪ್ಲಾಜಾದಲ್ಲಿ ಅಗ್ನಿ ಅವಘಡ: ಕಟ್ಟಡದ ಮೂರನೇ ಅಂತಸ್ತಿನಿಂದ ಜಿಗಿದ ಇಬ್ಬರು ಸೇಫ್
ರೋಗಿಯ ಸಂಬಂಧಿಕರಿಂದ ಆರೋಪ:ವೈದ್ಯರು ಸಿಪಿಆರ್ ನೀಡುವ ಮೂಲಕ ಅವರನ್ನು ಬದುಕಿಸಲು ಪ್ರಯತ್ನಿಸಿದರು. ಸಿಪಿಆರ್ ನಡೆಯುತ್ತಿರುವಾಗ, ಎಲೆಕ್ಟ್ರಿಕ್ ಸ್ವಿಚ್ ಬೋರ್ಡ್‌ನಿಂದ ಕಿಡಿಯು ಬೋರ್ಡ್‌ಗೆ ಸಂಪರ್ಕಗೊಂಡಿದ್ದ ರೋಗಿಯ ಆಕ್ಸಿಜನ್ ಮಾಸ್ಕ್‌ಗೆ ಬೆಂಕಿ ತಗುಲಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಸಣ್ಣ ಬೆಂಕಿಯಲ್ಲಿ ರೋಗಿಯು ಸುಟ್ಟು ಕರಕಲಾಗಿ, ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಕರು ಆಗ್ರಹಿಸಿದ್ದಾರೆ.