ಝಾಲವರ್ (ರಾಜಸ್ಥಾನ): ಝಾಲವರ್‌ನ ಉನ್ಹೆರ್ ಪೊಲೀಸ್ ಠಾಣೆ ಪ್ರದೇಶದ ಬಾಮನ್ ದೇವರಿಯನ್ ಗ್ರಾಮದಲ್ಲಿ ಸುಮಾರು 100 ಜನರಿಂದ ಅಪಹರಿಸಲ್ಪಟ್ಟ 38 ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ರಾಜಸ್ಥಾನ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ, ಎಸ್ಪಿ ಡಾ. ಕಿರಣ್ ಕಾಂಗ್ ಸಿಂಧು, ಕತ್ತಿಗಳು ಮತ್ತು ಇತರ ಶಸ್ತ್ರಾಸ್ತ್ರಗಳೊಂದಿಗೆ ಸುಮಾರು 100 ಜನರು ಗ್ರಾಮಕ್ಕೆ ಬಂದು ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿದ್ದಾರೆ ಎಂದು ಹೇಳಿದರು.
ರಾಜಸ್ಥಾನದ ಝಾಲವರ್ನಲ್ಲಿರುವ ಉನ್ಹೆರ್ ಪೊಲೀಸ್ ಠಾಣೆ ಪ್ರದೇಶದ ಬಾಮನ್ ದೇವರಿಯನ್ ಗ್ರಾಮಕ್ಕೆ ಸುಮಾರು 100 ಜನರು ಬಂದಿದ್ದಾರೆ ಎಂಬ ಮಾಹಿತಿ ಸಿಕ್ಕಿತು. ಅವರು ಮಧ್ಯಪ್ರದೇಶದ ರತ್ನಂ ಜಿಲ್ಲೆಯ ಅಲೋಟ್ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಬಸ್ ಮತ್ತು ಇತರ ವಾಹನಗಳಲ್ಲಿ ಬಂದಿದ್ದರು. ಅವರ ಬಳಿ ಚಾಕು ಮತ್ತು ಕತ್ತಿ ಸೇರಿದಂತೆ ಶಸ್ತ್ರಾಸ್ತ್ರಗಳಿದ್ದು, ಬಾಮನ್ ದೇವರಿಯನ್ ಗ್ರಾಮದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿದ್ದಾರೆ" ಎಂದು ಸಿಂಧು ಹೇಳಿದ್ದಾರೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿ 38 ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರು ಜನರು ಮತ್ತು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.