ಚೆನ್ನೈ (ತಮಿಳುನಾಡು):ಸೂಪರ್ಸ್ಟಾರ್ ರಜಿನಿಕಾಂತ್ ತಮ್ಮ ನಿರ್ಧಾರವನ್ನು ಬದಲಿಸಿ ರಾಜಕೀಯ ಪ್ರವೇಶಿಸುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದ ಅವರ ಅಭಿಮಾನಿಗಳು ಚೆನ್ನೈನ ವಳ್ಳುವರ್ ಕೊಟ್ಟಂನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಅನಾರೋಗ್ಯಕ್ಕೊಳಗಾಗಿ, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ರಜಿನಿ, ತಾವು ರಾಜಕೀಯಕ್ಕೆ ಪದಾರ್ಪಣೆ ಮಾಡುವುದಿಲ್ಲ ಎಂದು ಡಿಸೆಂಬರ್ 28ರಂದು ಘೋಷಿಸಿದ್ದರು.
2021ರ ಜನವರಿಯಲ್ಲಿ ರಾಜಕೀಯ ಪಕ್ಷ ಘೋಷಿಸುವುದಾಗಿ ಹೇಳಿದ್ದ ತಲೈವಾ, ಅನಾರೋಗ್ಯದ ದೃಷ್ಟಿಯಿಂದ ತಮ್ಮ ನಿರ್ಧಾರ ಹಿಂದೆತೆಗೆದುಕೊಂಡಿದ್ದರಿಂದ ಅಭಿಮಾನಿಗಳು ನಿರಾಶೆಗೊಂಡಿದ್ದರು. ಅಭಿಮಾನಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಕೂಡ ಯತ್ನಿಸಿದ್ದನು.