ನವದೆಹಲಿ: ಭಾರತದ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಮೇ.14 ರಂದು ಹಾಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅಧಿಕಾರ ಪೂರ್ಣಗೊಳಿಸಲಿದ್ದು, ಮೇ.15 ರಂದು ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ
ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ
ಕಾನೂನು ಸಚಿವ ಕಿರಣ್ ರಿಜಿಜು ಅವರು ಈ ಬಗ್ಗೆ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡು ರಾಜೀವ್ ಕುಮಾರ್ ಅವರಿಗೆ ಶುಭ ಹಾರೈಸಿದ್ದಾರೆ. ಇನ್ನೂ ರಾಜೀವ್ ಕುಮಾರ್ ಕೇಂದ್ರದ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡಿದ್ದಾರೆ. 36 ವರ್ಷಗಳಿಗೂ ಹೆಚ್ಚು ಕಾಲ ಭಾರತ ಸರ್ಕಾರದ ಸೇವೆಯ ಅಪಾರ ಅನುಭವ ಹೊಂದಿದ್ದಾರೆ. ಮುಂದಿನ ಭಾಗವಾಗಿ ಮೇ.15 ರಂದು ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ:ಗ್ಯಾನವಾಪಿ ಮಸೀದಿ ವಿವಾದ: ಸರ್ವೇ ಮುಂದುವರಿಸಿ ಮೇ 17 ರೊಳಗೆ ವರದಿ ನೀಡಲು ಕೋರ್ಟ್ ಸೂಚನೆ