ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಭರ್ಜರಿ ಮುನ್ನಡೆ ಪಡೆದುಕೊಂಡಿದೆ. ಈ ಮೂಲಕ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿದೆ.
215ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಮತಾ ಬ್ಯಾನರ್ಜಿಗೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವುದಕ್ಕೆ ಅಭಿನಂದನೆಗಳು. ಮುಂದಿನ ಅಧಿಕಾರಾವಧಿಗೆ ನನ್ನ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ತಮಿಳುನಾಡಿನಲ್ಲಿ ಗೆಲುವು ಸಾಧಿಸುತ್ತಿರುವ ಡಿಎಂಕೆ ಹಾಗೂ ಕೇರಳದ ಪಿಣರಾಯಿ ವಿಜಯನ್ಗೂ ರಾಜನಾಥ್ ಸಿಂಗ್ ಅಭಿನಂದನೆ ಸಲ್ಲಿಸಿದ್ದಾರೆ.