ನವದೆಹಲಿ: ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳು ಭರ್ಜರಿ ಮತಬೇಟೆಯಲ್ಲಿ ತೊಡಗಿಸಿಕೊಂಡಿದ್ದು, ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ನೀಡಿರುವ ರಾಜನಾಥ್ ಸಿಂಗ್, ಇಂದು ಮಧ್ಯಾಹ್ನ 12.25ಕ್ಕೆ ಬಿಸ್ವಾನಾಥದಲ್ಲಿ ನಡೆಯುತ್ತಿರುವ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿ ನಂತರ ಗೋಹಾಪುರಕ್ಕೆ ಮಧ್ಯಾಹ್ನ 1.40 ಭೇಟಿ ನೀಡಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ಮಧ್ಯಾಹ್ನ 3.05 ಕ್ಕೆ ಡೆರಗಾಂವ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುವ ಮೂಲಕ ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡಲಿದ್ದಾರೆ.