ನವದೆಹಲಿ/ಪಣಜಿ: ಅಪಘಾತದಲ್ಲಿ ಗಾಯಗೊಂಡಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಗೋವಾಕ್ಕೆ ಹೋಗುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಕೇಂದ್ರದ ರಕ್ಷಣಾ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರ ಆರೋಗ್ಯ ಮತ್ತು ಅವರ ನಿರಂತರ ಚಿಕಿತ್ಸೆಯ ಬಗ್ಗೆ ವಿಚಾರಿಸಲು ನಾನು ಇಂದು ಗೋವಾಕ್ಕೆ ಹೋಗುತ್ತೇನೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಅಪಾಯದಿಂದ ಪಾರಾದ ಕೇಂದ್ರ ಸಚಿವ ಶ್ರೀಪಾದ್ ನಾಯಕ್
ಪಣಜಿ:ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರು ಜೀವಾಪಾಯದಿಂದ ಪಾರಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಯಲ್ಲಿ ಸ್ಥಿರವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಇದನ್ನೂ ಓದಿ: ಒಳ ರಸ್ತೆಯಲ್ಲಿ ಬಂದಿದ್ದೇ ಸಚಿವರಿಗೆ ಕಂಟಕವಾಯ್ತಾ... ಪ್ರತ್ಯಕ್ಷದರ್ಶಿ ಹೇಳಿದ್ದೇನು?
ಕೇಂದ್ರ ಸಚಿವ ಶ್ರೀ ಶ್ರೀಪಾದ್ ನಾಯಕ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಗೋವಾ ವೈದ್ಯಕೀಯ ಕಾಲೇಜಿನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಎರಡು ಸಣ್ಣ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗಿದೆ. ಪ್ರಸ್ತುತ ಪರಿಸ್ಥಿತಿ ಗಮನಿಸಿದರೆ ದೆಹಲಿಗೆ ಸ್ಥಳಾಂತರಗೊಳ್ಳುವ ಅಗತ್ಯವಿಲ್ಲ ಎಂದು ಸಾವಂತ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ
ಈ ಬಗ್ಗೆ ಗೋವಾ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಕೇಂದ್ರ ಸಚಿವರ ಉತ್ತಮ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ; ಪತ್ನಿ, ಆಪ್ತ ಕಾರ್ಯದರ್ಶಿ ಸಾವು