ಬೆಂಗಳೂರು: ನಗರದಲ್ಲಿ ನಡೆಯಲಿರುವ ಶಸಸ್ತ್ರ ಪಡೆಗಳ ಹಿರಿಯ ಅಧಿಕಾರಿಗಳ ದಿನಾಚರಣೆ ನಿಮಿತ್ತ ಇಂದು ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಭಾಗಿಯಾಗಲಿದ್ದು, ಈ ವೇಳೆ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸಹ ಹಾಜರಿರಲಿದ್ದಾರೆ.
ದೇಶದ ರಕ್ಷಣೆಗಾಗಿ ಹುತಾತ್ಮರಾದ ಸೈನಿಕರ ನೆನಪಿನಲ್ಲಿ ಅವರ ಕುಟುಂಬಸ್ಥರ ಜೊತೆ ಸಿಂಗ್ ಹಾಗೂ ರಾವತ್ ನಗರದ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ಸೇನೆಯಲ್ಲಿ ದೀರ್ಘಕಾಲದ ಸೇವೆ ಸಲ್ಲಿಸಿ ಜನವರಿ 14, 1953ರಲ್ಲಿ ನಿವೃತ್ತಿ ಹೊಂದಿದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರ ನೆನಪಿನಾರ್ಥವಾಗಿ ಪ್ರತಿವರ್ಷ ಜನವರಿ 14ರಂದು ಶಸಸ್ತ್ರ ಪಡೆಗಳ ಹಿರಿಯ ಅಧಿಕಾರಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ.