ಕರ್ನಾಟಕ

karnataka

ETV Bharat / bharat

Telangana Rape case: ಆರೋಪಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ - ತೆಲಂಗಾಣದಲ್ಲಿ ಬಾಲಕಿ ಮೇಲೆ ಅತ್ಯಾಚಾರ

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಮಾಡಿ ಪರಾರಿಯಾಗಿದ್ದ ಆರೋಪಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Raju-committed-to-suicide-at-railway-track
Telangana Rape case: ಆರೋಪಿ ರೈಲಿಗೆ ಸಿಕ್ಕು ಆತ್ಮಹತ್ಯೆ

By

Published : Sep 16, 2021, 11:32 AM IST

Updated : Sep 16, 2021, 12:01 PM IST

ಹೈದರಾಬಾದ್(ತೆಲಂಗಾಣ):ಸೈದಾಬಾದ್​ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ಆರೋಪಿ ಪಲ್ಲಂಕೊಂಡ ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ರೈಲು ಹಳಿಗೆ ಬಿದ್ದು ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೈ ಮೇಲಿನ ಹಚ್ಚೆಯ ಆಧಾರದ ಮೇಲೆ ರಾಜುವನ್ನು ಗುರ್ತಿಸಲಾಗಿದೆ. ಸೆಪ್ಟೆಂಬರ್ 9ರಂದು ಹೈದರಾಬಾದ್​ನ ಸೈದಾಬಾದ್​ನಲ್ಲಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಕಿಯನ್ನು ಕೊಲೆಗೈದು ಆರೋಪಿ ಕಾಣೆಯಾಗಿದ್ದ.

ಆರೋಪಿಯ ಕೈ ಮೇಲಿನ ಹಚ್ಚೆ

ಪೊಲೀಸರು ಆತನಿಗಾಗಿ ಸಾಕಷ್ಟು ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದ್ದು, ಉಪ್ಪಲ್ ಪ್ರದೇಶದಲ್ಲಿ ನಿನ್ನೆ ಸುತ್ತಾಡಿದ್ದನು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಪೊಲೀಸರು ಈತನ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದರು.

ಆರೋಪಿಯ ಆತ್ಮಹತ್ಯೆ ದೃಢಪಡಿಸಿದ ಕೆಟಿಆರ್ ಮತ್ತು ಪೊಲೀಸರು

ಆರೋಪಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ತೆಲಂಗಾಣ ಡಿಜಿಪಿ ಸ್ಪಷ್ಟನೆ ನೀಡಿದ್ದಾರೆ. ಅತ್ಯಾಚಾರ ಆರೋಪಿಯ ಮೃತದೇಹ ರೈಲ್ವೆ ಟ್ರ್ಯಾಕ್ ಮೇಲೆ ಪತ್ತೆಯಾಗಿದೆ. ದೇಹದ ಮೇಲಿನ ಗುರುತುಗಳ ಮೂಲಕ ಆತನ ಗುರುತು ಪತ್ತೆ ಹಚ್ಚಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ತೆಲಂಗಾಣ ಡಿಜಿಪಿ ಟ್ವೀಟ್​

ಈ ಕುರಿತು ತೆಲಂಗಾಣ ಸಚಿವರಾದ ಕೆಟಿಆರ್​ ಟ್ವೀಟ್​ ಮಾಡಿದ್ದು, ಘಾನ್​ಪುರ ರೈಲ್ವೆ ಟ್ರಾಕ್ ಬಳಿ ಆರೋಪಿಯ ಶವ ಪತ್ತೆಯಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:ವಾಕಿಂಗ್​ಗೆ ಹೋಗಿದ್ದ ಯುವತಿ ಅಪಹರಣ..ಆರೋಪಿಗಳಿಗಾಗಿ ಖಾಕಿ ಬಲೆ

Last Updated : Sep 16, 2021, 12:01 PM IST

ABOUT THE AUTHOR

...view details