ನವದೆಹಲಿ :ಅಮಾನತುಗೊಂಡ ಸಂಸತ್ ಸದಸ್ಯರ ವಿಚಾರ ಮಂಗಳವಾರವೂ ಕೂಡ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದೆ. ಪ್ರತಿಪಕ್ಷಗಳ ಸದಸ್ಯರು ಸಂಸದರ ಅಮಾನತು ಸೇರಿದಂತೆ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಲು ಯತ್ನಿಸಿದ ವೇಳೆ ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರು ಸದನದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದ್ದಾರೆ.
ಪಟ್ಟಿ ಮಾಡಲಾದ ಸಮಸ್ಯೆಗಳನ್ನು ಮಂಡಿಸಲು ರಾಜ್ಯಸಭಾ ಸಂಸದರು ಮುಂದಾಗುತ್ತಿದ್ದಂತೆ ರಾಜ್ಯಸಭೆಯ ನಿಯಮ 267ರ ಅಡಿಯಲ್ಲಿ ತನಗೆ ನೋಟಿಸ್ ಬಂದಿದೆ. ಪಟ್ಟಿ ಮಾಡಲಾದ ಸಮಸ್ಯೆಗಳನ್ನು ತೆಗೆದುಕೊಳ್ಳಲು ದಿನದ ವ್ಯವಹಾರವನ್ನು ನಿಗದಿಪಡಿಸುವಂತೆ ಸೂಚನೆ ನೀಡಿದರು.