ಕೋಲ್ಕತ್ತಾ:ಪಶ್ಚಿಮ ಬಂಗಾಳ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಮುಖಂಡರು ಅಬ್ಬರದ ಪ್ರಚಾರ ಸಭೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇಂದು ಯೋಗಿ ಆದಿತ್ಯನಾಥ್ ಮಾಲ್ಡಾದಲ್ಲಿ ಮತ ಪ್ರಚಾರ ನಡೆಸಿದರು.
ಮಾಲ್ಡಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಿಎಂ ಯೋಗಿ ಭಾಷಣ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಪಶ್ಚಿಮ ಬಂಗಾಳ ಭಾರತದ ರಾಷ್ಟ್ರೀಯತೆಯ ನೆಲ. ಭಾರತದ ಸ್ವಾತಂತ್ರ್ಯ ಹೋರಾಟದ ನೆಲ. ಆದರಿಂದು ಅರಾಜಕತೆಯ ವಾತಾವರಣ ನಿರ್ಮಾಣಗೊಂಡಿದೆ. ಈ ಬೆಳವಣಿಗೆ ಇಡೀ ದೇಶವನ್ನು ನೋಯಿಸುತ್ತಿದೆ. ಪಶ್ಚಿಮ ಬಂಗಾಳವನ್ನು ಹೊಸದಾಗಿ ಸ್ಥಾಪಿಸಿ, ಬದಲಾವಣೆ ತರಲು ಬಿಜೆಪಿಯನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ಇಲ್ಲಿನ ಜನರ ಮೇಲಿದೆ ಎಂದರು.
ಇದನ್ನೂ ಓದಿ:ಕೋವಿಡ್ ಲಸಿಕೆ ಹಾಕಿಸಿಕೊಂಡ ಕಮಲ್ ಹಾಸನ್.. ನಾಳೆಯಿಂದ ಪ್ರಚಾರದಲ್ಲಿ ಭಾಗಿ
ಪ.ಬಂಗಾಳದಲ್ಲಿ ದುರ್ಗಾ ಪೂಜೆಯನ್ನು ನಿಷೇಧಿಸಲಾಗಿದೆ. ಈದ್ ಸಮಯದಲ್ಲಿ ಗೋಹತ್ಯೆ ಮಾಡಲಾಗುತ್ತದೆ. ಹಸು ಕಳ್ಳಸಾಗಣೆ ಮೂಲಕ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗುತ್ತಿದೆ. ಈ ಘಟನಾವಳಿಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಮೌನವಾಗಿದೆ. ಆದರೀಗ ರಾಜ್ಯದಲ್ಲಿ ಜೈಶ್ರೀ ರಾಮ್ ಘೋಷಣೆ ನಿಷೇಧಿಸಲು ಮಮತಾ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಯೋಗಿ ಗುಡುಗಿದರು.
ಲವ್ ಜಿಹಾದ್, ಹಸುಗಳ ಅಕ್ರಮ ಸಾಗಣೆ ತಡೆ ಕಾಯ್ದೆ ಈಗಲೂ ಪಶ್ಚಿಮ ಬಂಗಾಳದಲ್ಲಿ ಜಾರಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇದರಿಂದ ರಾಜ್ಯಕ್ಕೆ ಅಪಾಯವಿದೆ. ಉತ್ತರ ಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸುತ್ತಿದ್ದ ಸರ್ಕಾರದ ಪರಿಸ್ಥಿತಿ ಈಗ ಏನಾಗಿದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಅವರು ಎಚ್ಚರಿಸಿದರು.