ಶ್ರೀನಗರ:ಹವಾಮಾನ ವೈಪರೀತ್ಯ ಕಾರಣದಿಂದಾಗಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರ ಲಡಾಖ್‌ನ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕ ಭೇಟಿ ರದ್ದಾಗಿದೆ.
ಕೆಟ್ಟ ಹವಾಮಾನದ ಪರಿಣಾಮ ರಾಮ್ನಾಥ್ ಕೋವಿಂದ್ ಅವರ ವಿಮಾನ ಶ್ರೀನಗರದಿಂದ ಹೊರಹೋಗಲು ಸಾಧ್ಯವಿಲ್ಲ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಆದ್ದರಿಂದ ರಾಷ್ಟ್ರಪತಿ ಅವರ ಲಡಾಖ್ ಭೇಟಿ ರದ್ದಾಗಿದೆ. ಹೀಗಾಗಿ, ಕೋವಿಂದ್ ಅವರು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಕಾಶ್ಮೀರದ ಹೈ ಆಲ್ಟಿಟ್ಯೂಡ್ ವಾರ್‌ಫೇರ್ ಶಾಲೆಯಲ್ಲಿ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಿದ್ದಾರೆ ಎಂದು ಎಂದು ಜಮ್ಮು ಮತ್ತು ಕಾಶ್ಮೀರ ಆಡಳಿತದ ಹಿರಿಯ ಅಧಿಕಾರಿ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.