ಕರ್ನಾಟಕ

karnataka

ETV Bharat / bharat

'ರಾಮನ ಆಶೀರ್ವಾದ ನಿಮ್ಮೊಂದಿಗಿರಲಿ..': ರಾಹುಲ್ ಯಾತ್ರೆಗೆ ಶುಭ ಕೋರಿದ ರಾಮಮಂದಿರ ಮುಖ್ಯ ಅರ್ಚಕ - ಈಟಿವಿ ಭಾರತ ಕನ್ನಡ

ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್​ ಜೋಡೋ ಯಾತ್ರೆಗೆ ಶುಭ ಹಾರೈಸಿ ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರು ಪತ್ರ ಬರೆದಿದ್ದಾರೆ. ಇಂದು ಭಾರತ್ ಜೋಡೋ ಯಾತ್ರೆ ದೆಹಲಿಯಿಂದ ಉತ್ತರ ಪ್ರದೇಶ ಪ್ರವೇಶಿಸಲಿದೆ.

Ram temple chief priest
ಅರ್ಚಕ

By

Published : Jan 3, 2023, 9:44 AM IST

ಅಯೋಧ್ಯೆ (ಉತ್ತರ ಪ್ರದೇಶ) : ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಇಂದು ಉತ್ತರ ಪ್ರದೇಶಕ್ಕೆ ಆಗಮಿಸುತ್ತಿದ್ದು, ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರು ರಾಹುಲ್​ ಗಾಂಧಿಗೆ ಪತ್ರ ಬರೆದು, ಶ್ರೀರಾಮನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ಹಾರೈಸಿದ್ದಾರೆ.

‘ನೀವು ದೇಶಕ್ಕಾಗಿ ಮಾಡುವ ಕೆಲಸ ಎಲ್ಲರಿಗೂ ಪ್ರಯೋಜನಕಾರಿ. ನಿಮ್ಮ ದೀರ್ಘಾಯುಷ್ಯಕ್ಕಾಗಿ ಸದಾ ಪ್ರಾರ್ಥಿಸುತ್ತೇನೆ. ನೀವು ಮಾಡುತ್ತಿರುವ ಕೆಲಸಗಳು ಯಶಸ್ವಿಯಾಗಲಿ. ಶ್ರೀರಾಮನ ಆಶೀರ್ವಾದ ನಿಮ್ಮ ಮೇಲಿರಲಿ’ ಎಂದು ದಾಸ್ ಪತ್ರದಲ್ಲಿ ಬರೆದಿದ್ದಾರೆ.

ಭಾರತ್‌ ಜೋಡೋ ಯಾತ್ರೆ: ಭಾರತ್​ ಜೋಡೋ ಯಾತ್ರೆಯು ಡಿಸೆಂಬರ್​ 24 ರಂದು ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಿತ್ತು. ಚಳಿಗಾಲದ ವಿಶ್ರಾಂತಿ ಪಡೆದುಕೊಂಡು 9 ದಿನಗಳ ಬಳಿಕ ಇಂದು ಪುನರಾರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಉತ್ತರಪ್ರದೇಶ ಪ್ರವೇಶಿಸಲಿದೆ.

ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಪ್ರಾರಂಭಗೊಂಡ ಯಾತ್ರೆ ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ ಹಾಗು ದೆಹಲಿಯನ್ನು ಹಾದು ಉತ್ತರಪ್ರದೇಶಕ್ಕೆ ಬರುತ್ತಿದೆ. ಈ ಯಾತ್ರೆಯು 2023 ರ ಫೆಬ್ರವರಿ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ:ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ABOUT THE AUTHOR

...view details