ನವದೆಹಲಿ: ವಿಜಯದಶಮಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ದೇಶದ ಜನರಿಗೆ ಶುಭ ಕೋರಿದ್ದಾರೆ.
ವಿಜಯದಶಮಿ: ದೇಶದ ಜನತೆಗೆ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ - Ramanath Kovind and Modi tweet news
2021ರ ವಿಜಯದಶಮಿಯ ಪವಿತ್ರ ದಿನದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ದೇಶದ ಸಮಸ್ತ ಜನತೆಗೆ 2021ರ ವಿಜಯದಶಮಿಯ ಶುಭಾಶಯಗಳು. ಎಂದು ತಿಳಿಸಿದ್ದಾರೆ. ವಿಜಯದಶಮಿಯ ಪ್ರಯುಕ್ತ ಪ್ರಧಾನಿ ಮಧ್ಯಾಹ್ನ ಸುಮಾರು 12.10ಕ್ಕೆ ರಕ್ಷಣಾ ಸಚಿವಾಲಯ ಆಯೋಜಿಸಿರುವ 7 ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿ, 'ವಿಜಯ ದಶಮಿಯ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ದಸರಾ ಹಬ್ಬವು ನೈತಿಕತೆ, ಒಳ್ಳೆಯತನ ಮತ್ತು ಸದ್ಗುಣಗಳ ಹಾದಿಯಲ್ಲಿ ನಡೆಯಲು ನಮಗೆ ಸ್ಫೂರ್ತಿ ನೀಡುತ್ತದೆ. ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಮೃದ್ಧಿ ಮತ್ತು ಸಂತೋಷ ತರಲಿ' ಎಂದು ಆಶಿಸಿದ್ದಾರೆ