ಹೈದರಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ರಾಮೋಜಿ ಗ್ರೂಪ್ ಅಧ್ಯಕ್ಷ ರಾಮೋಜಿ ರಾವ್ ಅವರನ್ನು ಭೇಟಿ ಮಾಡಿದರು. ಚಲನಚಿತ್ರೋದ್ಯಮ ಮತ್ತು ಮಾಧ್ಯಮ ಕ್ಷೇತ್ರಗಳಿಗೆ ಅವರ ಕೊಡುಗೆಯನ್ನು ಶ್ಲಾಘಿಸಿದ ಶಾ, ರಾಮೋಜಿಯವರ ಜೀವನ ಪಯಣವು ಚಲನಚಿತ್ರೋದ್ಯಮ ಮತ್ತು ಮಾಧ್ಯಮ ಉದ್ಯಮಗಳಲ್ಲಿನ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ರಾಮೋಜಿಯವರ ಜೀವನ ಪಯಣ ಲಕ್ಷಾಂತರ ಜನರಿಗೆ ಸ್ಫೂರ್ತಿ: ಅಮಿತ್ ಶಾ - ರಾಮೋಜಿಯವರ ಜೀವನ ಪಯಣ ಲಕ್ಷಾಂತರ ಜನರಿಗೆ ಸ್ಫೂರ್ತಿ
ರಾಮೋಜಿ ಗ್ರೂಪ್ ಅಧ್ಯಕ್ಷ ರಾಮೋಜಿ ರಾವ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೈದರಾಬಾದ್ನಲ್ಲಿ ಭೇಟಿ ಮಾಡಿದರು.
Ramoji life journey inspired millions: Amit Shah
ರಾವ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಗೃಹ ಸಚಿವರು ರಾಮೋಜಿ ರಾವ್ ಅವರ ನಿವಾಸದಲ್ಲಿ ಇರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. "ಶ್ರೀ ರಾಮೋಜಿ ರಾವ್ ಅವರ ಜೀವನ ಪಯಣವು ಅದ್ಭುತವಾಗಿದ್ದು, ಚಲನಚಿತ್ರೋದ್ಯಮ ಮತ್ತು ಮಾಧ್ಯಮಕ್ಕೆ ಸಂಬಂಧಿಸಿದ ಲಕ್ಷಾಂತರ ಜನರಿಗೆ ಸ್ಪೂರ್ತಿದಾಯಕವಾಗಿದೆ. ಇಂದು ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದೆ ಎಂದು ಶಾ ಟ್ವೀಟ್ ಮಾಡಿದ್ದಾರೆ.