ಪಂಚಕುಲ (ಹರಿಯಾಣ) :ಡೇರಾ ಸಚ್ಚಾ ಸೌಧ ಅನುಯಾಯಿಯಾಗಿದ್ದ ರಂಜಿತ್ ಸಿಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಾಮ್ ರಹೀಮ್ ಸಿಂಗ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಜೀವಾವಧಿ(ಜೀವನ ಪರ್ಯಂತ) ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಹೊರ ಬಿದ್ದಿದೆ. ಹರಿಯಾಣದ ಪಂಚಕುಲದ ವಿಶೇಷ ಸಿಬಿಐ ಕೋರ್ಟ್ ಈ ಆದೇಶ ಹೊರ ಹಾಕಿದೆ.
2002ರ ಜುಲೈ 10ರಂದು ರಂಜಿತ್ ಸಿಂಗ್ ಕೊಲೆಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ರಂಜಿತ್ ಪುತ್ರ ದೂರು ದಾಖಲು ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 2003ರ ಡಿಸೆಂಬರ್ ತಿಂಗಳಲ್ಲಿ ಸಿಬಿಐ ಕೋರ್ಟ್ನಲ್ಲಿ ಎಫ್ಐಆರ್ ದಾಖಲು ಮಾಡಲಾಗಿತ್ತು. ಇದರ ವಿಚಾರಣೆ ನಡೆಸಿದ್ದ ಕೋರ್ಟ್ ರಾಮ್ ರಹೀಮ್ ಸಿಂಗ್ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿತ್ತು.