ಕರ್ನಾಟಕ

karnataka

ETV Bharat / bharat

'83' teaser out: 'ಭಾರತದ ದೊಡ್ಡ ಗೆಲುವಿನ ಹಿಂದಿರುವ ಕಥೆ' ಹೇಳಲಿದ್ದಾರೆ ರಣವೀರ್​ - ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್

ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ಸಿನಿಮಾ"83" ಯ ಟೀಸರ್​ ಬಿಡುಗಡೆಯಾಗಿದ್ದು, ಸಿನಿಮಾ ಇದೇ ಡಿಸೆಂಬರ್​ 24 ಕ್ಕೆ ವಿಶ್ಯಾದ್ಯಂತ ಬಿಡುಗಡೆಯಾಗಲಿದೆ.

glory
glory

By

Published : Nov 27, 2021, 9:47 AM IST

ಬಾಲಿವುಡ್ ಪವರ್ ಕಪಲ್ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಶುಕ್ರವಾರ ಭಾರತದ "ಶ್ರೇಷ್ಠ ಕಥೆ"ಯ ಒಂದು ನೋಟವನ್ನು ಅನಾವರಣಗೊಳಿಸುವ ತಮ್ಮ ಮುಂಬರುವ ಚಿತ್ರ "83" ನ ಟೀಸರ್ ಅನ್ನು ಶೇರ್​ ಮಾಡಿಕೊಂಡಿದ್ದಾರೆ.

ರಣವೀರ್​ ಸಿಂಗ್​ ನಟನೆಯ ಬಹುನಿರೀಕ್ಷಿತ ಸಿನಿಮಾ ‘83’ ಟೀಸರ್​​ ಬಿಡುಗಡೆಯಾಗಿದೆ.. ಟೀಸರ್ ಮೂಲಕ ರಿಲೀಸ್​ ದಿನಾಂಕವನ್ನು ಚಿತ್ರತಂಡ ಖಚಿತಪಡಿಸಿದೆ. ಡಿ.24ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಕಬೀರ್​ ಖಾನ್​ ನಿರ್ದೇಶನವಿರುವ ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೂಡ ನಟಿಸಿದ್ದಾರೆ.

'83' teaser out

1983ರಲ್ಲಿ ಭಾರತ ಕ್ರಿಕೆಟ್​ ತಂಡ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ವೆಸ್ಟ್​ ಇಂಡೀಸ್​ ತಂಡವನ್ನು ಮಣಿಸಿದ ಘಟನೆಯನ್ನೇ ಆಧಾರವಾಗಿ ಇಟ್ಟುಕೊಂಡು ‘83’ ಸಿನಿಮಾ ತಯಾರಾಗಿದೆ. ಕಪಿಲ್​ ದೇವ್​ ಪಾತ್ರದಲ್ಲಿ ನಟಿಸಲು ರಣವೀರ್​ ಸಿಂಗ್​ ತುಂಬ ಶ್ರಮಪಟ್ಟಿದ್ದಾರೆ. ಟೀಸರ್​ ಮತ್ತು ಪೋಸ್ಟರ್​ಗಳಲ್ಲಿ ಅವರ ಲುಕ್​ ಗಮನ ಸೆಳೆದಿದೆ.

ಟೀಸರ್​ ಹಂಚಿಕೊಂಡಿರುವ ರಣವೀರ್​ ಸಿಂಗ್​ ಅವರು ಟ್ರೇಲರ್​ ಬಿಡುಗಡೆ ದಿನಾಂಕವನ್ನು ತಿಳಿಸುವ ಮೂಲಕ ಇನ್ನಷ್ಟು ನಿರೀಕ್ಷೆ ಮೂಡಿಸಿದ್ದಾರೆ. ‘ಭಾರತದ ದೊಡ್ಡ ಗೆಲುವಿನ ಹಿಂದಿರುವ ಕಥೆಯನ್ನು ವಿವರಿಸುವ ‘83’ ಸಿನಿಮಾ ಡಿ.24ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ ತೆರೆಕಾಣಲಿದೆ. ನವೆಂಬರ್​ 30ರಂದು ಟ್ರೇಲರ್​ ಬಿಡುಗಡೆ ಆಗಲಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ABOUT THE AUTHOR

...view details