ಕರ್ನಾಟಕ

karnataka

ETV Bharat / bharat

ಬಾಲಕಿಯರ ಮೇಲೆ ಅತ್ಯಾಚಾರ ಆರೋಪ: ಬೈಕ್‌ಸಮೇತ ಇಬ್ಬರಿಗೆ ಬೆಂಕಿ ಹಚ್ಚಿದ ಗ್ರಾಮಸ್ಥರು - ಬಾಲಕಿಯರ ಮೇಲೆ ಅತ್ಯಾಚಾರಗೈದ ಆರೋಪ

ಅಪ್ರಾಪ್ತೆಯರ ಮೇಲೆ ಅತ್ಯಾಚಾರವೆಸಗಿರುವ ಆರೋಪದಡಿ ಇಬ್ಬರ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ.

Rape accused burnt alive in Gumla
Rape accused burnt alive in Gumla

By

Published : Jun 9, 2022, 5:03 PM IST

ಗುಮ್ಲಾ(ಜಾರ್ಖಂಡ್​): ಅಪ್ರಾಪ್ತೆಯರ ಮೇಲೆ ಅತ್ಯಾಚಾರಗೈದಿರುವ ಆರೋಪದ ಮೇಲೆ ಗ್ರಾಮಸ್ಥರು ಬೈಕ್​ ಸಮೇತ ಇಬ್ಬರಿಗೆ ಬೆಂಕಿ ಹಚ್ಚಿದ್ದಾರೆ. ಜಾರ್ಖಂಡ್​​ನ ಗುಮ್ಲಾದಲ್ಲಿ ಘಟನೆ ನಡೆದಿದೆ. ಆರೋಪಿಗಳಾದ ಸುನಿಲ್​ ಹಾಗೂ ಆಶಿಶ್​ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.


ಪ್ರಕರಣದ ವಿವರ:ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಅಶಿಶ್​ ಹಾಗೂ ಸುನಿಲ್​ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ, ಮಾತುಕತೆ ನಡೆಸುವ ಉದ್ದೇಶದಿಂದ ಇಬ್ಬರನ್ನು ಕಿಶುನ್​​ ಒರಾನ್​ ಎಂಬಾತ ತನ್ನೊಂದಿಗೆ ಪಕ್ಕದ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದಾನೆ. ಈ ಸಂದರ್ಭದಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ತಕ್ಷಣವೇ ಕೆಲವರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಕಾರಣ ರಾಂಚಿ ರಿಮ್ಸ್​​ಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. ಚಿಕಿತ್ಸೆ ವೇಳೆ ಸುನಿಲ್​ ಸಾವನ್ನಪ್ಪಿದರೆ, ಆಶಿಶ್​ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

ಎಸ್​​ಡಿಪಿಒ ಮನೀಶ್ ಚಂದ್ರ ಲಾಲ್ ಮಾಹಿತಿ ನೀಡಿ, 'ಅಪ್ರಾಪ್ತೆಯರ ಮೇಲೆ ಅತ್ಯಾಚಾರವೆಸಗಿರುವ ಆರೋಪ ಇವರ ಮೇಲಿದೆ. ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಅವರ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲಾಗಿದೆ. ಆರಂಭದಲ್ಲಿ ಹಲ್ಲೆ ನಡೆದಿದೆ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು' ಎಂದರು.

ABOUT THE AUTHOR

...view details