ಕರ್ನಾಟಕ

karnataka

ETV Bharat / bharat

ಅತ್ಯಾಚಾರ ಪ್ರಕರಣ: ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದು ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿ

ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಕಾರಿನಿಂದ ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದು ಪೊಲೀಸರಿಂದ ತಪ್ಪಿಸಿಕೊಂಡ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಜರುಗಿದೆ.

rape-accused-evades-police-in-noida
ಅತ್ಯಾಚಾರ ಪ್ರಕರಣ: ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದು ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿ

By

Published : Nov 10, 2022, 6:21 PM IST

ನೋಯ್ಡಾ (ಉತ್ತರ ಪ್ರದೇಶ):ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ತನ್ನ ಕಾರಿನಿಂದ ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದಿದ್ದಾನೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು, ಸೆಕ್ಯೂರಿಟಿ ಗಾರ್ಡ್‌ಗೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಇಲ್ಲಿನ ಅಮ್ರಪಾಲಿ ಜೋಡಿಯಾಕ್ ಸೊಸೈಟಿ ನಿವಾಸಿ ನೀರಜ್ ಸಿಂಗ್​ ಎಂಬಾತ ಕಂಪನಿಯೊಂದರಲ್ಲಿ ಜನರಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಆತನೊಂದಿಗೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣದ ತನಿಖೆಗಾಗಿ ಪೊಲೀಸರು ಆರೋಪಿ ನೀರಜ್​ನನ್ನು ವಶಕ್ಕೆ ಪಡೆಯಲು ಸೊಸೈಟಿಗೆ ಬಂದಿದ್ದರು. ಆದರೆ, ಈ ವೇಳೆ ತಪ್ಪಿಸಲು ಯತ್ನಿಸಿದ್ದಾರೆ. ಆಗ ಸೆಕ್ಯೂರಿಟಿ ಗಾರ್ಡ್‌ ಆರೋಪಿಯನ್ನು ತಡೆಯಲು ಪ್ರಯತ್ನಿಸಿದ್ದು, ಕಾರಿನಿಂದ ಗುದ್ದಿ ಆರೋಪಿ ಪರಾರಿಯಾಗಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ವೈರಲ್​ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನೋಯ್ಡಾ ಡಿಸಿಪಿ ಹರೀಶ್​ ಚಂದ್ರ, ಅತ್ಯಾಚಾರ ಆರೋಪದ ದೂರು ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು. ಆಗ ಆರೋಪಿ ಪರಾರಿಯಾಗಲು ಯತ್ನಿಸಿದಾಗ ಕಾರನ್ನು ವೇಗವಾಗಿ ಚಲಾಯಿಸಿ ಸೆಕ್ಯೂರಿಟಿ ಗಾರ್ಡ್‌ಗೆ ಗುದ್ದಿದ್ದಾರೆ. ಈ ಘಟನೆಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಗಾಯಗೊಂಡಿದ್ದಾರೆ. ಸದ್ಯ ಆರೋಪಿ ತಲೆ ಮರೆಸಿಕೊಂಡಿದ್ದು, ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು: ವೈದ್ಯೆಯೊಂದಿಗೆ ಅಸಭ್ಯ ವರ್ತನೆ ತೋರಿದ ಬಸ್ ಕ್ಲೀನರ್ ಬಂಧನ

ABOUT THE AUTHOR

...view details