ಜೈಪುರ(ರಾಜಸ್ಥಾನ):ಮಸಾಜ್ ಮಾಡುವ ನೆಪದಲ್ಲಿ ನೆದರ್ಲ್ಯಾಂಡ್ ಮಹಿಳೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ್ದು, ಆರೋಪಿಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಯುರ್ವೇದ ಮಸಾಜ್ ನೆಪದಲ್ಲಿ ನೆದರ್ಲ್ಯಾಂಡ್ ಮಹಿಳೆ ಮೇಲೆ ದುಷ್ಕೃತ್ಯವೆಸಗಲಾಗಿದ್ದು, ನಗರದ ಹೋಟೆಲ್ನಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಆರೋಪಿ ಬಂಧನ ಮಾಡಿದ್ದಾರೆ.
ಬಂಧಿತ ಆರೋಪಿ ಕೇರಳದ ನಿವಾಸಿಯಾಗಿದ್ದು, ಜೈಪುರದ ಖತಿಪುರದಲ್ಲಿ ಮಸಾಜ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದನು. ವಿದೇಶಿ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಕೇರಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಿಚಾ ತೋಮರ್ ತಿಳಿಸಿದ್ದಾರೆ.