ಲಖನೌ(ಉತ್ತರ ಪ್ರದೇಶ): ಮುಸ್ಲಿಂ ಮಹಿಳೆಯರಿಗೆ ಪೂಜಾರಿಯೊಬ್ಬರು ಬಹಿರಂಗವಾಗಿ ಅಪಹರಣ ಮತ್ತು ಅತ್ಯಾಚಾರದ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರು ದಿನಗಳ ಹಿಂದೆ ಮಸೀದಿ ಹೊರಗಡೆಯೇ ಇಂತಹ ಹೇಳಿಕೆ ನೀಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ರಸ್ತೆಯಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಕಾರಿನಲ್ಲಿ ಕುಳಿತಿದ್ದ ಪೂಜಾರಿಯೊಬ್ಬರು ಮಾತನಾಡುತ್ತಾ, ಮುಸ್ಲಿಂ ಮಹಿಳೆಯರಿಗೆ ಈ ರೀತಿಯ ಬೆದರಿಕೆ ಹಾಕಿದ್ದಾರೆ. ಇದರ ವಿಡಿಯೋವನ್ನು ಫ್ಯಾಕ್ಟ್ ಚೆಕ್ಕಿಂಗ್ ವೆಬ್ಸೈಟ್ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಎಂಬುವವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಇದನ್ನು ಗಮನಿಸಿರುವ ರಾಷ್ಟ್ರೀಯ ಮಹಿಳಾ ಆಯೋಗವು ಪೂಜಾರಿ ಹೇಳಿಕೆಯನ್ನು ಖಂಡಿಸಿದ್ದಲ್ಲದೇ, ಗಂಭೀರವಾಗಿ ಪರಿಗಣಿಸಿದೆ.