ಕರ್ನಾಟಕ

karnataka

ETV Bharat / bharat

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬಂಧನದ ವೇಳೆ ಅಶ್ಲೀಲ ವಿಡಿಯೋ ನೋಡ್ತಿದ್ದ​ ಆರೋಪಿ! - ದೆಹಲಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಕಾಮುಕನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ವಿಕ್ಷಣೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Delhi rape news
Delhi rape news

By

Published : Jan 18, 2022, 6:12 PM IST

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಎಂಟು ವರ್ಷದ ಅಪ್ರಾಪ್ತೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಗಿದ್ದಾನೆ. ಈ ಪ್ರಕರಣ ಉತ್ತರ ದೆಹಲಿಯ ಅಲಿಪುರ್​​ದಲ್ಲಿ ನಡೆದಿದೆ.

ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿ ಸಮೀರ್ ಎಂಬಾತನನ್ನು ಬಂಧನ ಮಾಡಲಾಗಿದ್ದು, ಬಂಧನದ ವೇಳೆ ಆತ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಎಂದು ತಿಳಿದು ಬಂದಿದೆ.


ಘಟನೆಯ ವಿವರ:

ಪುಟ್ಟ ಬಾಲಕಿ ನಿನ್ನೆ ಸಂಜೆ ತನ್ನ ಅಕ್ಕನೊಂದಿಗೆ ಊರ ಹೊರಗಿನ ದೇವಸ್ಥಾನಕ್ಕೆ ತೆರಳಿದ್ದಳು. ದೇವಸ್ಥಾನದ ಬಳಿ ನಿಂತುಕೊಂಡಿದ್ದ ವೇಳೆ ಅಲ್ಲಿಗೆ ಸಮೀರ್​ ಬಂದಿದ್ದಾನೆ. ಈ ವೇಳೆ ತನ್ನೊಂದಿಗೆ ಮನೆಗೆ ಬರುವಂತೆ ಕರೆದಿದ್ದಾನೆ. ಸಮೀರ್​ನನ್ನು ತನ್ನ ತಂದೆಯ ಜೊತೆ ನೋಡಿರುವ ಕಾರಣಕ್ಕೆ ಆತನೊಂದಿಗೆ ಬಾಲಕಿ ಹೋಗಿದ್ದಾಳೆ. ಈ ವೇಳೆ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಪರಾರಿಯಾಗಿದ್ದಾನೆ.

ಇದನ್ನೂ ಓದಿ:ಕೋವಿಡ್‌ ಪರೀಕ್ಷೆ ಹೆಚ್ಚಿಸುವಂತೆ​ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಪತ್ರ

ಬಾಲಕಿ ಅಳುತ್ತಾ ದೇವಸ್ಥಾನಕ್ಕೆ ಬಂದಿದ್ದು, ಈ ವೇಳೆ ಸಂಬಂಧಿಕರಿಗೆ ಮಾಹಿತಿ ಗೊತ್ತಾಗಿದೆ. ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದು, ತಂಡ ರಚನೆ ಮಾಡಿ ಶೋಧಕಾರ್ಯ ನಡೆಸಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸಮೀರ್ ದುಷ್ಕೃತ್ಯವೆಸಗಿರುವುದು ಗೊತ್ತಾಗಿದೆ. ತಕ್ಷಣವೇ ಆತನ ಬಂಧನ ಮಾಡಲು ತೆರಳಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುತ್ತಿರುವುದು ಕಂಡು ಬಂದಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details