ಗಾಜಿಯಾಬಾದ್:ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಗಾಜಿಯಾಬಾದ್ನ ಇಂದಿರಾಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬಾಲಕಿಯ ತಾಯಿ ಮನೆಯಲ್ಲಿ ಇಲ್ಲದ ವೇಳೆ ನೆರೆಮನೆಯ ವ್ಯಕ್ತಿಯೋರ್ವ ಬಾಲಕಿಯ ಮೇಲೆ ಅತ್ಯಾಚಾರ(ಡಿಜಿಟಲ್ ರೇಪ್) ಎಸಗಿದ್ದಾನೆ.
ಈ ಸಂಬಂಧ ಬಾಲಕಿ ತನ್ನ ತಾಯಿಗೆ ಹೇಳಿದಾಗ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬಾಲಕಿಯ ಮೇಲೆ ಡಿಜಿಟಲ್ ಅತ್ಯಾಚಾರ ನಡೆದಿದೆ. ಸದ್ಯ ಆರೋಪಿಯನ್ನು ಗುರುತಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ. ಇನ್ನು, ಬಾಲಕಿಯ ತಾಯಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಕೆಲಸದಿಂದ ಮನೆಗೆ ಹಿಂದಿರುಗಿದಾಗ ಬಾಲಕಿ ತನ್ನ ಮೇಲೆ ನಡೆದ ದುಷ್ಕೃತ್ಯದ ಬಗ್ಗೆ ತಾಯಿಗೆ ವಿವರಿಸಿದ್ದಾಳೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.