ಸೋನಿಪತ್(ಹರಿಯಾಣ): ಇಲ್ಲಿನ ಹಳ್ಳಿಯೊಂದರಲ್ಲಿ ಒಡಹುಟ್ಟಿದ ಯುವತಿಯರಿಬ್ಬರ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಪ್ರಕರಣ ನಡೆದು 20 ದಿನಗಳ ಬಳಿಕ ಬೆಳಕಿಗೆ ಬಂದಿದೆ.
ಹರಿಯಾಣದ ಸೋನಿಪತ್ನ ಗೋಹಾನಾದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕಾಮುಕರಿಬ್ಬರು ಚಾಕುವಿನಿಂದ ಬೆದರಿಸಿ ಅವರ ಮೇಲೆ ಅತ್ಯಾಚಾರವೆಸಗಿದ್ದು, ಇದರ ವಿಡಿಯೋ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾಗಿ ವರದಿಯಾಗಿದೆ. ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದ್ರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬೆದರಿಕೆ ಕಾರಣ ಸುಮಾರು 20 ದಿನಗಳ ಕಾಲ ಯುವತಿಯರು ಯಾರಿಗೂ ಮಾಹಿತಿ ನೀಡಿಲ್ಲ. ಆದರೆ, ಇದೀಗ ಪೊಲೀಸರಿಗೆ ದೂರು ನೀಡಲಾಗಿದ್ದು, ಯುವಕರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಅತ್ಯಾಚಾರಕ್ಕೊಳಗಾಗಿರುವ ಇಬ್ಬರು ಯುವತಿಯರು ಈಗಾಗಲೇ ಮದುವೆಯಾಗಿದ್ದಾರೆ. ಏಪ್ರಿಲ್ 25ರಂದು ಈ ಘಟನೆ ನಡೆದಿದ್ದು, ಅವರು ತವರು ಮನೆಗೆ ಆಗಮಿಸಿದ್ದರು. ಈ ವೇಳೆ ತಮ್ಮ ಗಂಡಂದಿರಿಗೆ ಬಲವಂತವಾಗಿ ಮಾದಕ ದ್ರವ್ಯ ನೀಡಿದ್ದು, ಬಳಿಕ ದುಷ್ಕೃತ್ಯ ಎಸಗಿದ್ದಾಗಿ ಹೇಳಿಕೊಂಡಿದ್ದಾರೆ.