ಕರ್ನಾಟಕ

karnataka

ETV Bharat / bharat

ಅತ್ಯಾಚಾರ ಸಂತ್ರಸ್ತೆಯ ಸಹೋದರನ ಮರ್ಮಾಂಗ ಕತ್ತರಿಸಿದ ದುಷ್ಕರ್ಮಿಗಳು - ಅತ್ಯಾಚಾರ ಸಂತ್ರಸ್ತೆಯ ಸಹೋದರ

ಸಹೋದರಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಸಹೋದರನ ಮರ್ಮಾಂಗ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

attack
Attack

By

Published : Jul 2, 2021, 10:37 PM IST

ಸುಲ್ತಾನಪುರ್​(ಉತ್ತರ ಪ್ರದೇಶ): ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆಯ ಸಹೋದರನ ಮರ್ಮಾಂಗ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಸುಲ್ತಾನಪುರ್​ದಲ್ಲಿ ನಡೆದಿದೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ಆತನ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಸಹೋದರಿ ಮೇಲೆ ನಡೆದಿದ್ದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆಕೆಯ ಸಹೋದರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದ. ಇದೇ ಕಾರಣಕ್ಕಾಗಿ ಮೇಲೆ ದ್ವೇಷ ಸಾಧಿಸುತ್ತಿದ್ದ ಆರೋಪಿಗಳು ಇದೀಗ ಮರ್ಮಾಂಗ ಕತ್ತರಿಸಿದ್ದಾರೆ.

ದುಷ್ಕರ್ಮಿಗಳಿಂದ ದಾಳಿಗೊಳಗಾದ ವ್ಯಕ್ತಿ

ಇದನ್ನೂ ಓದಿರಿ: ಒಲಿಂಪಿಕ್ಸ್​ಗೆ ಅರ್ಹತೆ ಪಡೆದಿದ್ದ ಕುಸ್ತಿಪಟು ಸಮಿತ್​ ಮಲಿಕ್​ ಮೇಲೆ 2 ವರ್ಷ ನಿರ್ಬಂಧ

2019ರಲ್ಲಿ ಯುವತಿಯೋರ್ವಳ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಆಕೆಯ ಸಹೋದರ ಪ್ರಕರಣ ದಾಖಲು ಮಾಡಿದ್ದನು. ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧನ ಮಾಡಲಾಗಿತ್ತು. ಆದರೆ ಜಾಮೀನು ಪಡೆದುಕೊಂಡು ಅವರು ಹೊರಬಂದಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಮಾಡಿಕೊಳ್ಳುವಂತೆ ಆತನಿಗೆ ಬೆದರಿಕೆ ಹಾಕಿದ್ದರು.

ಜೂನ್​ 26ರಂದು ಸಂತ್ರಸ್ತೆ ಸಹೋದರ ಬೇರೊಂದು ಗ್ರಾಮಕ್ಕೆ ಹೋಗುತ್ತಿದ್ದಾಗ ಆತನ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಜನನಾಂಗ ಕತ್ತರಿಸಿದ್ದಾರೆ. ಇದೀಗ ಆರೋಪಿಗಳ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ತಮಗೆ ನ್ಯಾಯ ಒದಗಿಸುವಂತೆ ಸಂತ್ರಸ್ತೆಯ ಕುಟುಂಬ ಸಿಎಂ ಯೋಗಿ ಆದಿತ್ಯನಾಥ್​ ಬಳಿ ಕೋರಿದೆ.

ABOUT THE AUTHOR

...view details