ನವದೆಹಲಿ:ಕೋವಿಡ್ ವೇಳೆ ಆರಂಭಿಸಲಾದ ಪಿಎಂ ಕೇರ್ಸ್ ಫಂಡ್ಗೆ ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ.
ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ, ಇಂಡಿಕಾಪ್ಸ್ ಮತ್ತು ಪಿರಮಲ್ ಫೌಂಡೇಶನ್‌ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಎಂ ಕೇರ್ಸ್ ಫಂಡ್ ಟ್ರಸ್ಟಿಗಳ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಹೊಸದಾಗಿ ನೇಮಕವಾದ ಟ್ರಸ್ಟಿಗಳು ಮತ್ತು ಸಲಹಾ ಮಂಡಳಿ ಸದಸ್ಯರನ್ನು ಪಿಎಂ ಕೇರ್ಸ್ ನಿಧಿಯ ಅಂಗವಾಗಲು ಪ್ರಧಾನಿ ಮೋದಿ ಅವರು ಸ್ವಾಗತಿಸಿದರು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.