ಕರ್ನಾಟಕ

karnataka

ETV Bharat / bharat

ದಾಭೋಲ್ಕರ್‌ ಹತ್ಯೆ ಪ್ರಕರಣ: 5 ಆರೋಪಿಗಳ ವಿರುದ್ಧ ದೋಷಾರೋಪ

ಮೌಢ್ಯವಿರೋಧಿ ಹೋರಾಟಗಾರ ಡಾ.ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ವಿಚಾರಣೆ ನಡೆದಿದ್ದು, ವಿಶೇಷ ನ್ಯಾಯಾಲಯ ದೋಷಾರೋಪ ನಿಗದಿಪಡಿಸಿದೆ.

Dabholkar murder case
ದಾಭೋಲ್ಕರ್‌ ಹತ್ಯೆ ಪ್ರಕರಣ

By

Published : Sep 16, 2021, 10:41 AM IST

ಪುಣೆ: ಮೌಢ್ಯವಿರೋಧಿ ಹೋರಾಟಗಾರ ಡಾ.ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣ ಸಂಬಂಧ ಐವರು ಆರೋಪಿಗಳ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯ ದೋಷಾರೋಪ ನಿಗದಿಪಡಿಸಿದೆ. ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಎಸ್‌.ಆರ್‌.ನವಂದರ್‌ ಈ ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ವೀರೇಂದ್ರ ಸಿನ್ಹ್ ತಾವ್ಡೆ, ಸಚಿನ್‌ ಅಂದೂರೆ ಹಾಗೂ ಶರದ್‌ ಕಳಸ್ಕರ್‌ ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಇನ್ನುಳಿದಂತೆ ಆರೋಪಿಗಳಾದ ಶರದ್‌ ಪುನಾಲೇಕರ್ ಹಾಗೂ ವಿಕ್ರಮ್‌ ಭಾವೆ ಅವರು ನ್ಯಾಯಾಲಯಕ್ಕೆ ಭೌತಿಕವಾಗಿ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.

ಈ ವೇಳೆ ಆರೋಪಿಗಳು "ನಮ್ಮ ವಕೀಲರೊಂದಿಗೆ ಚರ್ಚಿಸಿ, ಪ್ರತಿಕ್ರಿಯೆ ಸಲ್ಲಿಸಲು ಸಮಯಾವಕಾಶ ನೀಡಬೇಕು" ಎಂದು ಮನವಿ ಸಲ್ಲಿಸಿದ್ದರು. ಆದರೆ, ನ್ಯಾಯಪೀಠವು ಅವರ ಮನವಿಯನ್ನು ತಿರಸ್ಕರಿಸಿದೆ. ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದ್ದು, ಪ್ರಕರಣದ ಮುಂದಿನ ವಿಚಾರಣೆ ಸೆ. 30ರಂದು ನಡೆಯಲಿದೆ ಎಂದು ಸಿಬಿಐ ಪರ ವಕೀಲ ಪ್ರಕಾಶ್‌ ಸೂರ್ಯವಂಶಿ ತಿಳಿಸಿದ್ದಾರೆ.

ಮಹಾರಾಷ್ಟ್ರ ಅಂಧಶ್ರದ್ಧಾ ನಿರ್ಮೂಲನಾ ಸಮಿತಿ ಸ್ಥಾಪಿಸಿದ್ದ ಡಾ. ನರೇಂದ್ರ ದಾಭೋಲ್ಕರ್‌ ಅವರು ಮೌಢ್ಯಗಳ ಆಚರಣೆ ವಿರುದ್ಧ ಹೋರಾಟ ನಡೆಸುತ್ತಿದ್ದರು. ಆದರೆ, ಅವರ ಧೋರಣೆಗಳನ್ನು ವಿರೋಧಿಸುತ್ತಿದ್ದ ಬಲಪಂಥೀಯ ಸಂಘಟನೆ ಸದಸ್ಯರು ದಾಭೋಲ್ಕರ್‌ ಅವರನ್ನು 2013ರ ಆಗಸ್ಟ್‌ 20ರಂದು ಗುಂಡಿಕ್ಕಿ ಹತ್ಯೆ ಮಾಡಿದರು ಎಂದು ಆರೋಪಿಸಲಾಗಿದೆ. ಆರೋ‍ಪಿಗಳ ವಿರುದ್ಧ ಯುಎಪಿಎ ಹಾಗೂ ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ದೋಷಾರೋಪ ಹೊರಿಸಲಾಗಿದೆ.

ABOUT THE AUTHOR

...view details