ಮುಂಬೈ: ಕೊಲೆ, ದರೋಡೆ, ಪ್ರಾಣ ಬೆದರಿಕೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯ ಪೊಲೀಸ್ ಕಸ್ಟಡಿ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ.
ಭೂಗತ ಪಾತಕಿ ರವಿ ಪೂಜಾರಿ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯ ಮುಂಬೈ ಪೊಲೀಸ್ ಕಸ್ಟಡಿ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ.
2019ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದ ಸೆನೆಗಲ್ನಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನ ಮಾಡಲಾಗಿತ್ತು. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಈತನ ಮೇಲಿದ್ದ ಕಾರಣ ಮುಂಬೈ ಪೊಲೀಸರು ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಬೆಂಗಳೂರು ಪೊಲೀಸರ ಬಳಿ ಮನವಿ ಮಾಡಿದ್ದರು. ಇದೀಗ ಬಾಡಿ ವಾರಂಟ್ ಮೇಲೆ ಆತನನ್ನು ಮುಂಬೈ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದ್ದು, 2016ರಲ್ಲಿ ಗಜಲಿ ರೆಸ್ಟೋರೆಂಟ್ ಗುಂಡಿನ ದಾಳಿ ಪ್ರಕರಣದಲ್ಲಿ ಸಹ ರವಿ ಪೂಜಾರಿ ಭಾಗಿಯಾಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ ತನಿಖೆ ಮುಂದುವರೆದಿದೆ.
ಇನ್ನು ಹೆಚ್ಚಿನ ವಿಚಾರಣೆ ಹಿನ್ನೆಲೆ ಆತನನ್ನು ಇನ್ನೂ ಕೆಲ ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲೇ ಇರಿಸಿಕೊಳ್ಳುವಂತೆ ಮುಂಬೈ ಪೊಲೀಸರು ಮನವಿ ಮಾಡಿದ ಹಿನ್ನೆಲೆ ನ್ಯಾಯಾಲಯ ಪೊಲೀಸ್ ಕಸ್ಟಡಿ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಿ, ಆದೇಶ ಹೊರಡಿಸಿದೆ.