ಮುಂಬೈ (ಮಹಾರಾಷ್ಟ್ರ): ಕೊರೊನಾ ಎರಡನೇ ಅಲೆಯು ದೇಶವನ್ನು ತೀವ್ರ ಸಂಕಷ್ಟಕ್ಕೆ ದೂಡುತ್ತಿದ್ದು, ಇಂದು ಬೆಳಿಗ್ಗೆ 10:00 ಗಂಟೆಗೆ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಈ ಕುರಿತು ಮಾತನಾಡಲಿದ್ದಾರೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.
ಕೋವಿಡ್ ಹಾಟ್‌ಸ್ಪಾಟ್ ಆಗಿ ಭಾರತ ಹೊರಹೊಮ್ಮಿದ್ದು, ಹೆಚ್ಚುತ್ತಿರುವ ಪ್ರಕರಣಗಳು ಆರೋಗ್ಯ ವ್ಯವಸ್ಥೆಯನ್ನು ಮುಳುಗಿಸಿರುವ ಸಂದರ್ಭದಲ್ಲಿ ಶಕ್ತಿಕಾಂತ ದಾಸ್ ಆರ್ಥಿಕತೆಯನ್ನು ಬೆಂಬಲಿಸುವ ಕ್ರಮಗಳನ್ನು ಪ್ರಕಟಿಸಬಹುದು ಎಂದು ನಿರೀಕ್ಷಿಸಲಾಗಿದೆ.
ಭಾರತವು ಈಗಾಗಲೇ ಒಟ್ಟು ಕೋವಿಡ್ ಸೋಂಕುಗಳ ಸಂಖ್ಯೆಯಲ್ಲಿ 2 ಕೋಟಿ ಗಡಿ ದಾಟಿದೆ.
ಇದನ್ನೂ ಓದಿ:ವಿಜಯ್ ಮಲ್ಯ, ನೀರವ್ ಮೋದಿಯನ್ನ ಹಸ್ತಾಂತರಿಸಿ: ಬ್ರಿಟನ್ ಪಿಎಂಗೆ ಪ್ರಧಾನಿ ಮೋದಿ ಒತ್ತಾಯ
ಕೊರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್ ಡೌನ್ ವಿಧಿಸುವ ಒತ್ತಡವನ್ನು ಪ್ರಧಾನಿ ನರೇಂದ್ರ ಮೋದಿ ಇದುವರೆಗೆ ವಿರೋಧಿಸಿದ್ದಾರೆ. ಈ ವಾರದ ಆರಂಭದಲ್ಲಿ, ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಮತ್ತು ಕೊಟಕ್ ಮಹೀಂದ್ರಾ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಉದಯ್ ಕೊಟಕ್ ಅವರು ಕೋವಿಡ್ ಪ್ರಸರಣ ಸರಪಳಿಯನ್ನು ಕಡಿತಗೊಳಿಸಲು ಆರ್ಥಿಕ ಚಟುವಟಿಕೆಯನ್ನು ಮೊಟಕುಗೊಳಿಸುವುದನ್ನು ಪರಿಗಣಿಸುವಂತೆ ಸರ್ಕಾರವನ್ನು ಕೋರಿದ್ದರು.
ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಅಮೆರಿಕದ ಉನ್ನತ ಸಾರ್ವಜನಿಕ ಆರೋಗ್ಯ ತಜ್ಞ ಮತ್ತು ಶ್ವೇತಭವನದ ಮುಖ್ಯ ವೈದ್ಯಕೀಯ ಸಲಹೆಗಾರ ಡಾ.ಆಂಥೋನಿ ಫೌಸಿ ಇತ್ತೀಚೆಗೆ ಭಾರತದಲ್ಲಿ ರಾಷ್ಟ್ರವ್ಯಾಪಿ ಲಾಕ್ ಡೌನ್ ಮಾಡಲು ಶಿಫಾರಸು ಮಾಡಿದ್ದರು.