ಭಾರತೀಯ ರಿಸರ್ವ್ ಬ್ಯಾಂಕ್ನಿಂದ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದೆ. ಒಟ್ಟು 450 ಹುದ್ದೆಗಳ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು, ಪ್ರತಿ ರಾಜ್ಯದಲ್ಲಿ ನಿರ್ದಿಷ್ಟ ಹುದ್ದೆಗಳನ್ನು ಮೀಸಲಿಡಲಾಗಿದೆ. ಕರ್ನಾಟಕ್ಕೆ 58 ಹುದ್ದೆಗಳನ್ನು ಮೀಸಲಿಡಲಾಗಿದೆ. ಪದವಿ ಹೊಂದಿರುವ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಆರ್ಬಿಐನಲ್ಲಿ ಖಾಲಿ ಇರುವ 450 ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು. ಬೆಂಗಳೂರಿನಲ್ಲಿ ಒಟ್ಟು 58 ಹುದ್ದೆಗಳ ಮೀಸಲಿಡಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಶೇ 50ರಷ್ಟು ಅಂಕದೊಂದಿಗೆ ಪದವಿಯನ್ನು ಹೊಂದಿರಬೇಕು. ಯಾವ ರಾಜ್ಯಗಳಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆ ರಾಜ್ಯದ ಭಾಷೆ ಓದಲು, ಬರೆಯಲು ಮತ್ತು ಮಾತನಾಡುವಂತಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಠ ವಯೋಮಿತಿ 28 ವರ್ಷ ದಾಟಿರಬಾರದು. ಪ.ಜಾ, ಪ. ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ. ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳಿಗೆ 50 ರೂ. ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 450 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.