ತಿರುವನಂತಪುರ (ಕೇರಳ):ಮೆಟ್ರೋಮ್ಯಾನ್ ಇ.ಶ್ರೀಧರನ್ ಫೆಬ್ರವರಿ 21ರ ನಂತರ ಬಿಜೆಪಿ ಸೇರ್ಪಡೆಯಾಗಲಿದ್ದು, ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಿಎಂ ಆಗಲು ತಾನು ಸಿದ್ಧ ಎಂದು ಸ್ಪಷ್ಟನೆ ನೀಡಿದ್ದಾರೆ.
ಮುಂದಿನ ವಾರ ಇ.ಶ್ರೀಧರನ್ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ಕೇರಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ತನ್ನಮ ಉದ್ದೇಶ ಎಂದಿದ್ದು, ಸಿಎಂ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ ಎಂದಿದ್ದಾರೆ. ಬೃಹತ್ ಮಟ್ಟದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಹೇಳಿರುವ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಕೇರಳವನ್ನು ಸಾಲದ ಸುಳಿಯಿಂದ ಹೊರತರುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ಪಶ್ಚಿಮ ಬಂಗಾಳ ಕೋರ್ಟ್ನಿಂದ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಮನ್ಸ್ ಜಾರಿ.. ಕಾರಣ!?