ರಾಯ್ಬರೇಲಿ(ಉತ್ತರ ಪ್ರದೇಶ):ಕೇಂದ್ರ ಸರ್ಕಾರ ಕೃಷಿ ಮಸೂದೆ ಜಾರಿಗೊಳಿಸುವಾಗಲೂ ಅವರಿಗೆ ಸಮಸ್ಯೆಯಾಗಿತ್ತು. ಇದೀಗ ಕಾನೂನು ವಾಪಸ್ ಪಡೆದುಕೊಳ್ಳಲಾಗಿದೆ. ಈ ವೇಳೆ ಸಹ ಅವರಿಗೆ ಸಮಸ್ಯೆ ಉದ್ಭವವಾಗಿದೆ. ನಿಜವಾಗಲೂ ಅವರಿಗೆ ಏನು ಬೇಕು? ಎಂದು ಉತ್ತರಪ್ರದೇಶದ ರಾಯ್ಬರೇಲಿ ಕಾಂಗ್ರೆಸ್ನ ಬಂಡಾಯ ಶಾಸಕಿ ಆದಿತಿ ಸಿಂಗ್(MLA Aditi Singh) ಪ್ರಶ್ನೆ ಮಾಡಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾಗಿ ಪ್ರಿಯಾಂಕಾ ಗಾಂಧಿ(Priyanka Gandhi) ಹೇಳಬೇಕು. ಈ ವಿಷಯದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಬಂಡಾಯ ಶಾಸಕಿ ಆದಿತಿ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಲಖೀಂಪುರ ಖೇರಿ(Lakhimpur Kheri) ಸೇರಿದಂತೆ ಅನೇಕ ಸಮಸ್ಯೆಗಳನ್ನ ಪ್ರಿಯಾಂಕಾ ಗಾಂಧಿ ಯಾವಾಗಲೂ ರಾಜಕೀಯಗೊಳಿಸಿದ್ದಾರೆ. ಈ ಘಟನೆ ಕುರಿತು ಈಗಾಗಲೇ ಸಿಬಿಐ(CBI) ತನಿಖೆ ನಡೆಯುತ್ತಿದೆ. ಸುಪ್ರೀಂಕೋರ್ಟ್(supreme court)ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂಸ್ಥೆಗಳ ಮೇಲೆ ಪ್ರಿಯಾಂಕಾ ಗಾಂಧಿ ಅವರಿಗೆ ನಂಬಿಕೆ ಇಲ್ಲದಿದ್ದರೆ ಯಾರನ್ನು ನಂಬುತ್ತಾರೆ. ಇದು ನನಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.