ಕರ್ನಾಟಕ

karnataka

ETV Bharat / bharat

ಪಣಜಿಯ ತಾಜ್ ಹೋಟೆಲ್​ನಲ್ಲಿ ರಾತ್ರಿ ತಂಗಿದ ಮಹಾ ಬಂಡಾಯ ಶಾಸಕರು: ಇಂದು ಮುಂಬೈಗೆ ತೆರಳುವ ಸಾಧ್ಯತೆ - Maharashtra Chief Minister Uddhav Thackeray resignation

ಮಹಾರಾಷ್ಟ್ರ ಬಂಡಾಯ ಶಾಸಕರು ನಿನ್ನೆ ರಾತ್ರಿ ತಂಗಲು ಗೋವಾಕ್ಕೆ ಆಗಮಿಸಿದ್ದಾರೆ. ಸುಪ್ರಿಂಕೋರ್ಟ್ ಗುರುವಾರದಂದು ವಿಶ್ವಾಸ ಮತಯಾಚನೆಗೆ ಸೂಚಿಸಿರುವ ಕಾರಣ, ಅವರೆಲ್ಲರೂ ಇಂದು ಬೆಳಗ್ಗೆ ಮುಂಬೈಗೆ ತೆರಳುವ ನಿರೀಕ್ಷೆಯಿದೆ.

ಏಕನಾಥ ಶಿಂಧೆ
ಏಕನಾಥ ಶಿಂಧೆ

By

Published : Jun 30, 2022, 7:13 AM IST

ಪಣಜಿ: ಮಹಾರಾಷ್ಟ್ರ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂದೆ ಹಾಗೂ ಉಳಿದ ಇತರ ಬಂಡಾಯ ಶಾಸಕರು ಬುಧವಾರ ರಾತ್ರಿ ಗುವಾಹಟಿಯಿಂದ ದಾಬೋಲಿಮ್ ವಿಮಾನ ನಿಲ್ದಾಣ ತಲುಪಿ, ಅಲ್ಲಿಂದ ಪಣಜಿಯ ತಾಜ್ ಹೋಟೆಲ್‌ಗೆ ತೆರಳಿ ರಾತ್ರಿ ತಂಗಿದರು.

ದಾಬೋಲಿಮ್ ವಿಮಾನ ನಿಲ್ದಾಣದಿಂದ ಪಣಜಿಯ ತಾಜ್ ರೆಸಾರ್ಟ್ ಮತ್ತು ಕನ್ವೆನ್ಷನ್ ಸೆಂಟರ್‌ಗೆ ಬೋಗಿಗಳಲ್ಲಿ ಪ್ರಯಾಣಿಸುವಾಗ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಗುರುವಾರದಂದು ಸುಪ್ರಿಂಕೋರ್ಟ್ ವಿಶ್ವಾಸಮತಯಾಚನೆಗೆ ಸೂಚಿಸಿರುವ ಕಾರಣ, ಬಂಡಾಯ ಶಾಸಕರು ಇಂದು ಬೆಳಗ್ಗೆ ಮುಂಬೈಗೆ ತೆರಳುವ ನಿರೀಕ್ಷೆಯಿದೆ.

ವಿಶ್ವಾಸಮತಯಾಚನೆ ಮಾಡಲು ಸುಪ್ರೀಂಕೋರ್ಟ್​ ಸೂಚನೆ ನೀಡಿರುವ ಬೆನ್ನಲ್ಲೇ ಬಂಡಾಯ ಗುಂಪು ನಿನ್ನೆ ಗುವಾಹಟಿಯಿಂದ ಗೋವಾಗೆ ಪ್ರಯಾಣಿಸುತ್ತಿದ್ದಾಗ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಫೇಸ್​ಬುಕ್​ ಲೈವ್‌ನಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು.

ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಗುರುವಾರ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯ ಸಚೇತಕ ಸುನೀಲ್ ಪ್ರಭು ಅವರು ಸಲ್ಲಿಸಿದ ಮನವಿಯನ್ನ ನಿನ್ನೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ.

ಗುರುವಾರ ಬೆಳಗ್ಗೆ ಬಂಡಾಯ ಶಾಸಕರು ಮುಂಬೈಗೆ ತೆರಳುವವರೆಗೆ ದಾಬೋಲಿಮ್ ವಿಮಾನ ನಿಲ್ದಾಣ ಮತ್ತು ಪಣಜಿಯ ತಾಜ್ ರೆಸಾರ್ಟ್‌ನಲ್ಲಿನ ಭದ್ರತೆ ಹಿಂಪಡೆಯಲಾಗುವುದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ

ABOUT THE AUTHOR

...view details