ನವದೆಹಲಿ: ಮಹಾರಾಷ್ಟ್ರದ ಬಂಡಾಯ ಶಾಸಕರಿಗೆ ಅನರ್ಹತೆಯ ನೋಟಿಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಏಕನಾಥ ಶಿಂದೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ಧಾರೆ. ಅಲ್ಲದೇ, ತಮ್ಮ ಬದಲಿಗೆ ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರನ್ನು ಬೇರೆಯವನ್ನು ನೇಮಿಸಿರುವುದನ್ನೂ ಪ್ರಶ್ನಿಸಲಾಗಿದೆ.
ಮಹಾ ವಿಕಾಸ್ ಆಘಾಡಿ ಸರ್ಕಾರದ ವಿರುದ್ಧ ಏಕನಾಥ ಶಿಂದೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಿವಸೇನೆಯ 16 ಜನ ಶಾಸಕರಿಗೆ ಮಹಾರಾಷ್ಟ್ರ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅನರ್ಹತೆಯ ನೋಟಿಸ್ ಜಾರಿ ಮಾಡಿದ್ದರು. ಅಲ್ಲದೇ, ಜೂನ್ 27ರೊಳಗೆ ಉತ್ತರಿಸುವಂತೆ ಸೂಚಿಸಿದ್ದರು.