ಕರ್ನಾಟಕ

karnataka

ETV Bharat / bharat

ಬಾಲಕಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 142 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​ - sexually assaulting a ten year old girl

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಕೇರಳದ ಪತ್ತನಂತಿಟ್ಟ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 142 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿದೆ.

pocso
ಅಪರಾಧಿಗೆ 142 ವರ್ಷಗಳ ಕಠಿಣ ಜೈಲು ಶಿಕ್ಷೆ

By

Published : Oct 1, 2022, 1:39 PM IST

ಪತ್ತನಂತಿಟ್ಟ(ಕೇರಳ): ಹತ್ತು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಪತ್ತನಂತಿಟ್ಟ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ ಅಪರಾಧಿಗೆ ಬರೋಬ್ಬರಿ 142 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ತಿರುವಲ್ಲಾ ಮೂಲದ ಬಾಬು ಅಲಿಯಾಸ್​ ಆನಂದನ್ ಪಿಆರ್ (41) ಎಂಬಾತನಿಗೆ ಶಿಕ್ಷೆ ವಿಧಿಸಲಾಗಿದೆ. ಈತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಕುರಿತು ಕಳೆದ ವರ್ಷದ ಮಾರ್ಚ್​ 20 ರಂದು ಕೇಸ್​ ದಾಖಲಾಗಿತ್ತು. ಅಪರಾಧಿಯು ಮಗುವಿಗೆ ಹತ್ತಿರದ ಸಂಬಂಧಿಯಾಗಿದ್ದು, ಬಾಲಕಿಯ ಪೋಷಕರೊಂದಿಗೆ ಈತ ಒಟ್ಟಿಗೆ ವಾಸಿಸುತ್ತಿದ್ದ. 2019 ರ ಏಪ್ರಿಲ್ ತಿಂಗಳಿನಿಂದ ಮಾರ್ಚ್ 18, 2021 ರವರೆಗೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಇದನ್ನೂ ಓದಿ:ಶಿವಮೊಗ್ಗ: ಬಾಲಕರ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದವನಿಗೆ 20 ವರ್ಷ ಕಠಿಣ ಶಿಕ್ಷೆ

ಪ್ರಕರಣದ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ಅಪರಾಧಿಗೆ 142 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡದ ಮೊತ್ತ ಪಾವತಿಸದಿದ್ದಲ್ಲಿ ಮತ್ತೆ 3 ವರ್ಷ ಜೈಲು ಶಿಕ್ಷೆ ನೀಡಿದೆ.

ABOUT THE AUTHOR

...view details