ಕರ್ನಾಟಕ

karnataka

ETV Bharat / bharat

Tamil Nadu..ಮುಂದುವರಿದ ವರುಣಾರ್ಭಟ: ಚೆನ್ನೈ ಸೇರಿ ನೆರೆಯ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್(Red alert) ಘೋಷಿಸಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

By

Published : Nov 17, 2021, 12:07 PM IST

ಚೆನ್ನೈ: ಕಡಿಮೆ ಒತ್ತಡ ಕರಾವಳಿಗೆ ಸಮೀಪಿಸುತ್ತಿರುವ ಕಾರಣ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಾದ ( Chennai and its neighbouring districts) ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುಗಳಿಗೆ ಹವಾಮಾನ ಇಲಾಖೆ (Meteorological Department) ಬುಧವಾರ ಮತ್ತು ಗುರುವಾರ ರೆಡ್ ಅಲರ್ಟ್(Red alert) ಘೋಷಿಸಿದೆ.

20 ಮಿಮೀ ಮಳೆಯಾಗುವ ನಿರೀಕ್ಷೆ

ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳಲ್ಲಿ 20 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಕಡಿಮೆ ಒತ್ತಡ ಕರಾವಳಿ ತಲುಪುತ್ತಿದ್ದು, ಗುರುವಾರ ರಾತ್ರಿಯವರೆಗೂ ಚೆನ್ನೈ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎರಡು ದಿನಗಳ ಕಾಲ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಸಂಬಂಧಿತ ಚಂಡಮಾರುತದ ಪರಿಚಲನೆಯೊಂದಿಗೆ ಕಡಿಮೆ ಒತ್ತಡದ ಪ್ರದೇಶವು ಬಂಗಾಳಕೊಲ್ಲಿಯಲ್ಲಿದೆ. ನ.18 ರ ವೇಳೆಗೆ ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಯನ್ನು ತಲುಪಬಹುದು.

ಭಾರಿ ಮಳೆಯಿಂದಾಗಿ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿದ್ದು, ಹಲವಾರು ಮಂದಿ ಪರಿಹಾರ ಶಿಬಿರಗಳಲ್ಲಿದ್ದಾರೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಅವರನ್ನು ಅವರ ಮನೆಗಳಿಗೆ ಸ್ಥಳಾಂತರಿಸಲು ಕ್ರಮ ತೆಗೆದುಕೊಳ್ಳುತ್ತಿದ್ದು, ಆದಾಗ್ಯೂ, ಸುಮಾರು 848 ಜನರು ಇನ್ನೂ ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ರಾಮನಗರದಲ್ಲಿ ಧಾರಾಕಾರ ಮಳೆ: ಕಣ್ವ ಜಲಾಶಯದಲ್ಲಿ ತೇಲಿಬಂದವು ಮೃತದೇಹಗಳು

ABOUT THE AUTHOR

...view details