ನವದೆಹಲಿ :ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಅಧ್ಯಕ್ಷೆಯಾಗಿ ರೇಖಾ ಶರ್ಮಾ ಅವರನ್ನು ಮೂರು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ನಾಮನಿರ್ದೇಶನ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ತಿಳಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗದ ಅಧಿನಿಯಮ 1990, 1990 (20ರ 1990)ರ ಪ್ರಕಾರ, ಕೇಂದ್ರ ಸರ್ಕಾರ ಶ್ರೀಮತಿ ರೇಖಾ ಶರ್ಮಾ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ಮೂರು ವರ್ಷಗಳ ಅವಧಿಗೆ ನಾಮನಿರ್ದೇಶನ ಮಾಡಿದೆ.