ನಾಸಿಕ್ (ಮಹಾರಾಷ್ಟ್ರ):ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಸಂಬಂಧಿಕರು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋದ ಘಟನೆ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ.
ಪಠಾರ್ಡಿ ಫಾಟಾ ಪ್ರದೇಶದಲ್ಲಿ ವಾಸಿಸುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ಸಂಬಂಧಿಕರು ಕರೆದೊಯ್ದಿದ್ದರು. ಆದರೆ, ದಾಖಲಾಗುವ ಮುನ್ನವೇ ಆತ ಕೊನೆಯುಸಿರೆಳೆದಿದ್ದ.
ಈ ವಿಷಯ ತಿಳಿದ ಕುಟುಂಬಸ್ಥರು ಆ್ಯಂಬುಲೆನ್ಸ್ ಚಾಲಕನಿಗೆ ಮೃತದೇಹವನ್ನು ದಹನ ಮಾಡಲು ಹೇಳಿ ಅಲ್ಲಿಂದ ಹೊರಟು ಹೋಗಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಆ್ಯಂಬುಲೆನ್ಸ್ ಚಾಲಕ ಮಾಹಿತಿ ನೀಡಿದ್ದಾನೆ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಸಂಬಂಧಿಕರ ಹುಡುಕಾಟಕ್ಕೆ ಮುಂದಾಗಿದ್ದಾರೆ.
ಕೊರೊನಾದಿಂದ ವ್ಯಕ್ತಿ ಸಾವನ್ನಪ್ಪಿದರೆ ಅಂತ್ಯಕ್ರಿಯೆ ಮಾಡಲು ಸಹ ಕುಟುಂಬಸ್ಥರು ಹಿಂದೇಟು ಹಾಕುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಇನ್ನೂ ಕೆಲವೆಡೆ ಅಂತ್ಯಕ್ರಿಯೆಯ ಸಮಯದಲ್ಲಿ ಸಂಬಂಧಿಕರು ಸಹಾಯವನ್ನೂ ಮಾಡುವುದಿಲ್ಲ ಎಂದು ಸ್ಮಶಾನದಲ್ಲಿ ಕೆಲಸ ಮಾಡುವ ಜನರು ಹೇಳಿದ್ದಾರೆ.