ನವದೆಹಲಿ:ಬಂಧನದಿಂದ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಸದ್ಯಕ್ಕೆ ಅವರ ಬಂಧನ ಮಾಡದಂತೆ ಮಹತ್ವದ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆ ದಿನಾಂಕದವರೆಗೂ ಬಂಧನದಿಂದ ರಕ್ಷಣೆ ನೀಡಿರುವ ಸುಪ್ರೀಂಕೋರ್ಟ್, ಅವರ ವಿರುದ್ಧ ದಾಖಲಾಗಿರುವ ಎಲ್ಲ ಎಫ್ಐಆರ್ ಒಟ್ಟಿಗೆ ಸೇರಿಸಲು ಸೂಚಿಸಿದೆ. ಇದರ ಜೊತೆಗೆ ಮುಂದಿನ ವಿಚಾರಣೆ ಆಗಸ್ಟ್ 10ರಂದು ಮುಂದೂಡಿಕೆ ಮಾಡಿ, ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ.ಬಿ.ಪಾರ್ದಿವಾಲಾ ಅವರ ನೇತೃತ್ವದ ರಜಾಕಾಲದ ಪೀಠವು ಈ ಆದೇಶ ಹೊರಹಾಕಿದೆ. ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ ಶರ್ಮಾ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದವು.