ನವದೆಹಲಿ: ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಕಟು ಟೀಕಾ ಪ್ರಹಾರ ನಡೆಸಿದ ಕರ್ನಾಟಕ ನ್ಯಾಯಾಧೀಶ ಹೆಚ್.ಪಿ.ಸಂದೇಶ್ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇಂದು ಪ್ರಕರಣದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ, 3 ದಿನಗಳ ಕಾಲ ಈ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಮನವಿ ಮಾಡಿತು.
ಎಸಿಬಿ ಎಡಿಜಿಪಿ ವಿರುದ್ಧ ನ್ಯಾ.ಹೆಚ್.ಪಿ.ಸಂದೇಶ್ ಗರಂ: ವಿಚಾರಣೆ 3 ದಿನ ಮುಂದೂಡಲು ಸುಪ್ರೀಂ ಮನವಿ - Justice HP Sandesh of Karnataka High Court
ಕರ್ನಾಟಕ ನ್ಯಾಯಾಧೀಶ ಹೆಚ್.ಪಿ.ಸಂದೇಶ್ ಪ್ರಕರಣದ ತುರ್ತು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, 3 ದಿನಗಳ ಕಾಲ ಈ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಮನವಿ ಮಾಡಿದೆ.
ಸುಪ್ರೀಂಕೋರ್ಟ್ ಹಾಗೂ ನ್ಯಾ.ಹೆಚ್.ಪಿ.ಸಂದೇಶ್
ಜು.11 ರಂದು ಕೋರ್ಟ್ ನೀಡಿರುವ ಆದೇಶವನ್ನು ಪರಿಶೀಲಿಸಲು ಕಾಲಾವಧಿ ಬೇಕು. ಹೀಗಾಗಿ, ಇನ್ನೂ ಎರಡು ದಿನ ಪ್ರಕರಣದ ವಿಚಾರಣೆಗೆ ತಡೆ ನೀಡುವಂತೆ ಎಸಿಬಿ ಮನವಿ ಸಲ್ಲಿಸಿತ್ತು. ಪ್ರಕರಣದ ಮುಂದಿನ ವಿಚಾರಣೆ ಶುಕ್ರವಾರ ನಡೆಯಲಿದೆ.
ಇದನ್ನೂ ಓದಿ:ಹೈಕೋರ್ಟ್ ನ್ಯಾಯಾಧೀಶರಿಗೆ ವರ್ಗಾವಣೆ ಬೆದರಿಕೆ: ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ