ಕರ್ನಾಟಕ

karnataka

By

Published : May 28, 2021, 1:15 PM IST

ETV Bharat / bharat

ಕೊರೊನಾ ಔಷಧಿ, ವೈದ್ಯಕೀಯ ಸಲಕರಣೆಗಳ ಮೇಲಿನ ಜಿಎಸ್​ಟಿ ರದ್ದುಪಡಿಸಿ: ಪ್ರಿಯಾಂಕಾ ಗಾಂಧಿ

ಕೊರೊನಾ ಸಮಯದಲ್ಲಿ ಇವುಗಳ ಮೇಲೆ ತೆರಿಗೆ ವಿಧಿಸುವುದು ಕ್ರೌರ್ಯವಾಗುತ್ತದೆ. ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್‌ ಮಾಡಿದ್ದಾರೆ.

Priyanka Gandhi Vadra urge government to Remove GST on corona medicines
ಪ್ರಿಯಾಂಕಾ ಗಾಂಧಿ ಆಗ್ರಹ

ನವದೆಹಲಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಬಳಸಲಾಗುತ್ತಿರುವ ಎಲ್ಲಾ ಜೀವ ಉಳಿಸುವ ಔಷಧಿಗಳು ಮತ್ತು ವೈದ್ಯಕೀಯ ಸಲಕರಣೆಗಳ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರವನ್ನು ಒತ್ತಾಯಿದ್ದಾರೆ.

ಸರಕು ಮತ್ತು ಸೇವೆಗಳ ಮೇಲಿನ ತೆರಿಗೆಯನ್ನು ನಿರ್ಧರಿಸುವ ಜಿಎಸ್​ಟಿ ಕೌನ್ಸಿಲ್ ಸಭೆ ಇಂದು ನಡೆಯುತ್ತಿದ್ದು, ಈ ವೇಳೆ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕೊರೊನಾ ಸೋಂಕಿಗೊಳಗಾದ ಜನರು ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್, ಔಷಧಿ, ಲಸಿಕೆ ಹಾಗೂ ಆ್ಯಂಬುಲೆನ್ಸ್​​ಗಾಗಿ ಪರದಾಡುತ್ತಿದ್ದಾರೆ. ಈ ಸಮಯದಲ್ಲಿ ಇವುಗಳ ಮೇಲೆ ತೆರಿಗೆ ವಿಧಿಸುವುದು ಕ್ರೌರ್ಯವಾಗುತ್ತದೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ಜಿಎಸ್​ಟಿ ಮಂಡಳಿ ಸಭೆ ಇಂದು ನಡೆಯುತ್ತಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವ ವಹಿಸಿದ್ದಾರೆ.

For All Latest Updates

ABOUT THE AUTHOR

...view details