ಮುಂಬೈ:ಮಹಾರಾಷ್ಟ್ರದ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಪಕ್ಷಗಳ ಮೈತ್ರಿ ಸರ್ಕಾರವನ್ನ ‘ಮಹಾ ವಿಕಾಸ ಅಘಾಡಿ’ ಬದಲಿಗೆ 'ಮಹಾರಾಷ್ಟ್ರ ವಸೂಲಿ ಅಘಾಡಿ' ಎಂದು ಮರುನಾಮಕರಣ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ಆರೋಪಗಳ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, ಮಹಾರಾಷ್ಟ್ರವನ್ನು ಮಹಾ ವಸೂಲಿ ಅಘಾಡಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ನಾನು ಭಾವಿಸುತ್ತೇನೆ. ಎನ್‌ಸಿಪಿ ಸಚಿವರೊಬ್ಬರಿಂದ ಗೃಹ ಸಚಿವರು ಆದೇಶಗಳನ್ನು ತೆಗೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಅವರನ್ನು ಸಂಪುಟದಿಂದ ತೆಗೆದುಹಾಕಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಕಿಡಿಕಾರಿದರು.