ನವದೆಹಲಿ:ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಜಯ ಸಿಕ್ಕಿದ್ದು, ವೈದ್ಯಕೀಯ ಕೋರ್ಸ್‌ಗಳಿಗೆ ಅಖಿಲ ಭಾರತ ಕೋಟಾದಲ್ಲಿ ಒಬಿಸಿಗಳಿಗೆ ಶೇ.27 ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ರಷ್ಟು ಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ.
ಇದೇ ವೇಳೆ ಕೋರ್ಟ್, ಮೀಸಲಾತಿಯು ಅರ್ಹತೆಗೆ ವಿರುದ್ಧವಾಗಿಲ್ಲ, ಬದಲಿಗೆ ಅದರ ವಿತರಣಾ ಪರಿಣಾಮವನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಏಕಪೀಠ, ಸ್ಪರ್ಧಾತ್ಮಕ ಪರೀಕ್ಷೆಗಳು ಆರ್ಥಿಕ ಸಾಮಾಜಿಕ ಪ್ರಯೋಜನವನ್ನು ಪ್ರತಿಬಿಂಬಿಸುವುದಿಲ್ಲ. ಅದು ಕೆಲವು ವರ್ಗಗಳಿಗೆ ಸೇರಿದೆ. ಅರ್ಹತೆ ಸಾಮಾಜಿಕವಾಗಿ ಸಂದರ್ಭೋಚಿತವಾಗಿರಬೇಕು ಎಂದಿದೆ.