ಕರ್ನಾಟಕ

karnataka

ETV Bharat / bharat

ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಿಂದ ಅನಿಲ್ ದೇಶ್​​ಮುಖ್ ವಿರುದ್ಧದ ಆರೋಪಗಳ ತನಿಖೆ : ಸಿಎಂ ಠಾಕ್ರೆ ನಿರ್ಧಾರ - ಗೃಹ ಸಚಿವ ಅನಿಲ್ ದೇಶ್​ಮುಖ್ ಇತ್ತೀಚಿನ ಸುದ್ದಿ

ಮುಂಬೈನ ಮಾಜಿ ಪೊಲೀಸ್ ಆಯುಕ್ತರಾದ ಪರಮ್ ಬೀರ್​ ಸಿಂಗ್ ಅವರು ಗೃಹ ಸಚಿವರ ಮೇಲೆ ಹೊರಿಸಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ನಡೆಸಲು ದೇಶಮುಖ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮಾರ್ಚ್ 25 ರಂದು ಪತ್ರ ಬರೆದಿದ್ದರು..

allegations against Anil Deshmukh
ಗೃಹ ಸಚಿವ ಅನಿಲ್ ದೇಶ್​ಮುಖ್

By

Published : Mar 28, 2021, 3:21 PM IST

ಮುಂಬೈ :ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್​ ಆಯುಕ್ತ ಪರಮ್​ ಬೀರ್​ ಸಿಂಗ್​ ಮಾಡಿರುವ ಆರೋಪಗಳ ಬಗ್ಗೆ ನಿವೃತ್ತ ಹೈಕೋರ್ಟ್​ನ ನ್ಯಾಯಾಧೀಶರಿಂದ ತನಿಖೆ ನಡೆಸಲು ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ನಿರ್ಧರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೇಶ್​ಮುಖ್, ಮುಂಬೈನ ಮಾಜಿ ಪೊಲೀಸ್ ಆಯುಕ್ತರು ನನ್ನ ಮೇಲೆ ಹೊರಿಸಿರುವ ಆರೋಪಗಳನ್ನು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಲು ಮಹಾರಾಷ್ಟ್ರ ಸಿಎಂ ನಿರ್ಧರಿಸಿದ್ದಾರೆ" ಎಂದು ಮಾಹಿತಿ ನೀಡಿದರು.

ಓದಿ:"ಭ್ರಷ್ಟಾಚಾರ ಆರೋಪದ ತನಿಖೆ ನಡೆಸಿ": ಮಹಾ ಸಿಎಂಗೆ ಪತ್ರ ಬರೆದ ಅನಿಲ್ ದೇಶ್​ಮುಖ್

ಆಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣದಲ್ಲಿ ರಾಜ್ಯಕ್ಕೆ ಕೆಟ್ಟ ಹೆಸರನ್ನು ತಂದಿರುವ ತನ್ನದೇ ಸರ್ಕಾರ ಮತ್ತು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಅವರನ್ನು ಈ ಹಿಂದೆ ಶಿವಸೇನೆ ಟೀಕಿಸಿತ್ತು.

ಮುಂಬೈನ ಮಾಜಿ ಪೊಲೀಸ್ ಆಯುಕ್ತರಾದ ಪರಮ್ ಬೀರ್​ ಸಿಂಗ್ ಅವರು ಗೃಹ ಸಚಿವರ ಮೇಲೆ ಹೊರಿಸಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ನಡೆಸಲು ದೇಶಮುಖ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮಾರ್ಚ್ 25 ರಂದು ಪತ್ರ ಬರೆದಿದ್ದರು.

ABOUT THE AUTHOR

...view details