ಎಎಸ್ಪಿ ವಿವೇಕ್ ಸಿಂಹ ಅವರು ಘಟನೆಯ ಬಗ್ಗೆ ಮಾತನಾಡಿದ್ದಾರೆ ರೇವಾ (ಮಧ್ಯಪ್ರದೇಶ): ಜಿಲ್ಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಗ್ರಾಮದ ಜನರು ಪೊಲೀಸ್ ಠಾಣೆಗೆ ನುಗ್ಗಿ ಆರೋಪಿಯನ್ನು ಒಪ್ಪಿಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ, ಪೊಲೀಸ್ ಠಾಣೆಯ ಹೊರಗೆ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಸಾಕಷ್ಟು ಪ್ರಯತ್ನದ ನಂತರ ಪೊಲೀಸರು ಅವರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರರು. ವಾಸ್ತವವಾಗಿ, ಪೊಲೀಸರು ಅತ್ಯಾಚಾರದ ಆರೋಪಿಯನ್ನು ಬಂಧಿಸಿದ್ದರು.
ಆದರೆ, ಗ್ರಾಮಸ್ಥರ ಆಕ್ರೋಶ ಮಾತ್ರ ತಣಿದಿರಲಿಲ್ಲ. ಹೀಗಾಗಿ ಅವರೆಲ್ಲ ಠಾಣೆ ಎದುರು ಜಮಾಯಿಸಿ, ತಮ್ಮ ಸಿಟ್ಟನ್ನು ಹೊರ ಹಾಕಿದರು. ಆರೋಪಿಯ ಮನೆಗೆ ಬುಲ್ಡೋಜರ್ ಹತ್ತಿಸುವಂತೆ ಹಾಗೂ ಎನ್‌ಕೌಂಟರ್ ಮಾಡುವಂತೆ ಪೊಲೀಸರನ್ನು ಗ್ರಾಮಸ್ಥರು ಒತ್ತಾಯಿಸಿದರು.
5ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸೆಗಿದ ಆರೋಪಿ ಬಂಧನ : ಶುಕ್ರವಾರ ಈ ಘಟನೆ ನಡೆದಿತ್ತು. ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ತನ್ನ ನೆರೆಯ ವಿದ್ಯಾರ್ಥಿಯೊಂದಿಗೆ ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗ ಆರೋಪಿಗಳು ಇಬ್ಬರನ್ನೂ ದಾರಿಯಲ್ಲಿ ತಡೆದು ನಿಲ್ಲಿಸಿದ್ದರು. ಬಳಿಕ ಅಮಾಯಕ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಬಲವಂತವಾಗಿ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಇದರಿಂದ ಬಾಲಕಿಯ ಸ್ಥಿತಿ ಹದಗೆಟ್ಟಿತ್ತು. ದುರುಳರ ದುಷ್ಕೃತ್ಯದಿಂದ ತೀವ್ರ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿದ್ಯಾರ್ಥಿನಿ ತನ್ನ ಸಹಪಾಠಿ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಮನೆಗೆ ಮರಳುತ್ತಿದ್ದಳು ಎಂದು ಹೇಳಲಾಗುತ್ತಿದೆ. ಘಟನೆಯ ನಂತರ ಆ ವಿದ್ಯಾರ್ಥಿ ನಡೆದ ವಿಷಯವನ್ನು ಮನೆಯವರಿಗೆ ತಿಳಿಸಿದ್ದಾನೆ. ತಕ್ಷಣ ಕುಟುಂಬಸ್ಥರು ಬಾಲಕಿಗಾಗಿ ಹುಡುಕಾಟ ಆರಂಭಿಸಿದ್ದು, ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ನಂತರ ಗಂಭೀರ ಸ್ಥಿತಿಯಲ್ಲಿ ಪತ್ತೆಯಾದ ಬಾಲಕಿಯನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ, ಸಾಕಷ್ಟು ಪ್ರಯತ್ನದ ಬಳಿಕ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.
ಆರೋಪಿಯನ್ನ ತಮಗೆ ಒಪ್ಪಿಸುವಂತೆ ಗ್ರಾಮಸ್ಥರಿಂದ ಒತ್ತಾಯ : ಘಟನೆಯ ನಂತರ ಶುಕ್ರವಾರ ತಡರಾತ್ರಿ ಪೊಲೀಸರು ಆರೋಪಿಯನ್ನು ಬಂಧಿಸಿದಾಗ, ಕೋಪಗೊಂಡ ಸಾವಿರಾರು ಗ್ರಾಮಸ್ಥರು ಒಗ್ಗೂಡಿ ಶನಿವಾರ ಬೆಳಗ್ಗೆ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಲು ಪ್ರಾರಂಭಿಸಿದರು. ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ತಕ್ಕ ಪಾಠ ಕಲಿಸಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯ ಮನೆಗೆ ಬುಲ್ಡೋಜರ್ ನುಗ್ಗಿಸಿ ಎನ್‌ಕೌಂಟರ್ ಮಾಡುವಂತೆ ಅವರು ಆಗ್ರಹಿಸಿದ್ದಾರೆ.
ಮತ್ತೋರ್ವ ಯುವಕನಿಗಾಗಿ ಶೋಧ:ಘಟನೆಯ ವೇಳೆ ಆತನ ಸಹಚರರೊಬ್ಬರು ಆರೋಪಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಬಳಿಕ ಪೊಲೀಸರಿಗೆ ಈ ವಿಷಯ ತಿಳಿದು ಬಂದಿದ್ದು, ಇದೀಗ ಪೊಲೀಸರು ವಿಚಾರಣೆ ನಡೆಸಿ ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಸ್ನೇಹಿತರೊಂದಿಗೆ ಸಹಕರಿಸುವಂತೆ ಒತ್ತಾಯ: ಬೆಂಗಳೂರಿನಲ್ಲಿ ವಿಕೃತ ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ