ಕರ್ನಾಟಕ

karnataka

ETV Bharat / bharat

ಮೂರಂಸ್ತಿನ ರೈಸ್​ ಮಿಲ್​ ಕಟ್ಟಡ ಕುಸಿತ: ಇಬ್ಬರ ಸಾವು, 30 ಕ್ಕೂ ಅಧಿಕ ಮಂದಿ ನಾಪತ್ತೆ

ಮೂರಂಸ್ತಿನ ರೈಸ್​ ಮಿಲ್​ ಕಟ್ಟಡ ಕುಸಿದು ಅದರಲ್ಲಿ ನೂರಾರು ಕಾರ್ಮಿಕರು ಸಿಲುಕಿದ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಈಗಾಗಲೇ ಇಬ್ಬರು ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರಂಸ್ತಿನ ರೈಸ್​ ಮಿಲ್​ ಕಟ್ಟಡ ಕುಸಿತ
ಮೂರಂಸ್ತಿನ ರೈಸ್​ ಮಿಲ್​ ಕಟ್ಟಡ ಕುಸಿತ

By

Published : Apr 18, 2023, 10:59 AM IST

ಕರ್ನಾಲ್:ಹರಿಯಾಣದ ಕರ್ನಾಲ್‌ನಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿ, 18 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ, 30 ಕ್ಕೂ ಅಧಿಕ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಇಲ್ಲಿ ಹಲವು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಟ್ಟಡದಲ್ಲಿ ಮಲಗಿದ್ದರು. ಈ ವೇಳೆ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಕಟ್ಟಡದ ಅವಶೇಷಗಳಿಂದ ಇಬ್ಬರನ್ನು ಬದುಕುಳಿಸಲಾಗಿದೆ. 2 ಶವಗಳನ್ನೂ ಹೊರತೆಗೆಯಲಾಗಿದೆ. ತಕ್ಷಣ ಕಾರ್ಮಿಕರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.

ಮೂಲಗಳ ಪ್ರಕಾರ, ಹಲವು ಕಾರ್ಮಿಕರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಅವರು ಸಾವನ್ನಪ್ಪಿದ್ದಾರಾ ಅಥವಾ ಇಲ್ಲವೇ ಎಂಬುದರ ಬಗ್ಗೆ ಈವರೆಗೆ ಮಾಹಿತಿ ಲಭ್ಯವಾಗಿಲ್ಲ. ಕಟ್ಟಡದ ಅವಶೇಷಗಳನ್ನು ತೆರವು ಮಾಡಲು ಜೆಸಿಬಿಗಳು ದೊಡ್ಡ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆಯಿಂದಲೇ ಕಾರ್ಮಿಕರ ರಕ್ಷಣಾ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಕರ್ನಾಲ್ ಎಸ್ಪಿ ಶಶಾಂಕ್ ಸಾವನ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ರೈಸ್ ಮಿಲ್ ಮಾಲೀಕನ ವಿರುದ್ಧ ಪೊಲೀಸ್ ವಿಚಾರಣೆ ನಡೆಯುತ್ತಿದೆ. ಈ ಅಪಘಾತ ಹೇಗೆ ಸಂಭವಿಸಿತು? ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅಕ್ಕಿ ಗಿರಣಿಯ ಹೆಸರನ್ನು ಶಿವಶಕ್ತಿ ಎಂದು ಗುರುತಿಸಲಾಗಿದೆ.

ಮೂರು ಅಂತಸ್ತಿನ ಕಟ್ಟಡದಲ್ಲಿ ಸುಮಾರು 100 ಕಾರ್ಮಿಕರು ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಕಾರ್ಮಿಕರಲ್ಲಿ ಕೆಲವರು ತಮ್ಮ ಕೆಲಸಕ್ಕೆ ಹೋಗಿದ್ದರೆ, ಕೆಲವರು ರಾತ್ರಿ ಕಟ್ಟಡದಲ್ಲಿ ಮಲಗಿದ್ದರು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮೂರು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಇಲ್ಲಿಯವರೆಗೆ 18 ರಿಂದ 20 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು, ಇನ್ನೂ ಕೆಲವರು ಅವಶೇಷಗಳಡಿ ಹೂತುಹೋಗಿರುವ ಶಂಕೆ ಇದೆ.

3 ಅಂತಸ್ತಿನ ಕಟ್ಟಡ ಕುಸಿತಕ್ಕೆ ಕಾರಣಗಳು ಇನ್ನೂ ಪತ್ತೆಯಾಗಿಲ್ಲ. ರೈಸ್ ಮಿಲ್ ಕಟ್ಟಡದ ಗುಣಮಟ್ಟದ ಬಗ್ಗೆ ಕಾರ್ಮಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸ್ ತಂಡ ಮತ್ತು ಎನ್​ಡಿಆರ್​ಎಫ್​ ತಂಡ ಸ್ಥಳಕ್ಕೆ ಧಾವಿಸಿ ಕಟ್ಟಡದಡಿ ಸಿಲುಕಿದವರ ಬದುಕುಳಿಸುವ ಯತ್ನ ನಡೆಸಲಾಗುತ್ತಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜನರಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಹರಿಯಾಣದಲ್ಲಿ ಗರಿಷ್ಠ ಸಂಖ್ಯೆಯ ಅಕ್ಕಿ ಗಿರಣಿಗಳು ಕರ್ನಾಲ್‌ನ ತಾರಾವಾಡಿಯಲ್ಲಿವೆ. ಇಲ್ಲಿ ನೂರಾರು ರೈಸ್​ ಮಿಲ್​ಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಲಕ್ಷಾಂತರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ಕರ್ನಾಲ್ ಎಸ್​ಪಿ ಶಶಾಂಕ್ ಕುಮಾರ್ ತಿಳಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳೂ ಇಲ್ಲಿಗೆ ತಲುಪಿವೆ. ಈಗ ನಾಪತ್ತೆಯಾದ ಕಾರ್ಮಿಕರ ಪಟ್ಟಿಯನ್ನು ಪರಿಶೀಲಿಸುತ್ತಿದ್ದೇವೆ ಎಂದು ಶಶಾಂಕ್ ಕುಮಾರ್ ಹೇಳಿದರು.

ಓದಿ:ಆನೇಕಲ್​ನಲ್ಲಿ ಸಿಲಿಂಡರ್​ ಸ್ಫೋಟಕ್ಕೆ ಅಂಗಡಿ ಕುಸಿತ; ಓರ್ವನ ಸ್ಥಿತಿ ಗಂಭೀರ

ABOUT THE AUTHOR

...view details