ಚೆನ್ನೈ (ತಮಿಳುನಾಡು): ಧಾರ್ಮಿಕ ಹಕ್ಕು, ಜೀವಿಸುವ ಹಕ್ಕಿಗಿಂತ ಯಾವುದೇ ರೀತಿಯೂ ದೊಡ್ಡದಲ್ಲ ಎಂದು ತಮಿಳುನಾಡಿನ ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ, ಧರ್ಮದ ಆಚರಣೆಗಳು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರುವುದು ಮಾತ್ರವಲ್ಲದೇ ಜೀವನದ ಹಕ್ಕನ್ನೂ ಕೂಡಾ ಪ್ರತಿಪಾದಿಸಬೇಕು.
ಕೋವಿಡ್ ಸೋಂಕಿನ ಪರಿಸ್ಥಿತಿಯಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇದರಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದಾರೆ.
ಇದನ್ನೂ ಓದಿ:ಜುಲೈ 3ರಿಂದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆ
ಇದರ ಜೊತೆಗೆ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಯಾವುದೇ ರಾಜಿ ಮಾಡಿಕೊಳ್ಳದೆ ದೇವಾಲಯಗಳಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸುವ ಸಾಧ್ಯತೆಯನ್ನು ಪರಿಶೀಲೀಸುವಂತೆ ಮುಖ್ಯ ನ್ಯಾಯಮೂರ್ತಿ ಬ್ಯಾನರ್ಜಿ, ನ್ಯಾಯಮೂರ್ತಿಗಳಾದ ಸೆಂಥಿಲ್ ಕುಮಾರ್ ಮತ್ತು ರಾಮಮೂರ್ತಿ ಅವರಿದ್ದ ತ್ರಿಸದಸ್ಯ ಪೀಠ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ತಮಿಳುನಾಡಿನ ಐತಿಹಾಸಿಕ ದೇವಾಲಯವಾದ ಶ್ರೀರಂಗಂ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಕಾಲಕಾಲಕ್ಕೆ ನಡೆಸಲು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಸೂಚನೆ ನೀಡಬೇಕೆಂದು ಹೈಕೋರ್ಟ್ಗೆ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ಈ ರೀತಿಯಾಗಿ ಹೇಳಿದೆ. ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಂಗರಾಜನ್ ನರಸಿಂಹನ್ ಎಂಬುವವರು ಸಲ್ಲಿಸಿದ್ದರು.