ಸಿಂಗಾಪುರ್:ಲಾಲು ಯಾದವ್ ಅವರು ಸಿಂಗಾಪುರದಲ್ಲಿ ಯಶಸ್ವಿಯಾಗಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಈ ಮಾಹಿತಿಯನ್ನು ಲಾಲು ಯಾದವ್ ಪುತ್ರ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ. ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಲಾಲು ಯಾದವ್‌ಗೆ ಕಿಡ್ನಿ ದಾನ ಮಾಡಿದ್ದು, ರೋಹಿಣಿ ಆಚಾರ್ಯ ಮತ್ತು ಲಾಲು ಯಾದವ್ ಇಬ್ಬರೂ ಆರೋಗ್ಯವಾಗಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರ ಮಗಳು ರೋಹಿಣಿ ಸಿಂಗಾಪುರದಲ್ಲಿ ನೆಲೆಸಿದ್ದು, ಲಾಲು ಅವರು ಅಕ್ಟೋಬರ್‌ನಲ್ಲಿ ಸಿಂಗಾಪುರಕ್ಕೆ ಹೋಗಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದರು. ಹೀಗಾಗಿ ತಂದೆಗೆ ಕಿಡ್ನಿ ದಾನ ಮಾಡಲು ರೋಹಿಣಿ ಮುಂದಾಗಿದ್ದರು.
ಲಾಲು ತಮ್ಮ ಜೀವ ಉಳಿಸಿಕೊಳ್ಳಲು ಮಗಳ ಮೂತ್ರಪಿಂಡ ಸ್ವೀಕರಿಸಲು ನಿರಾಕರಿಸಿದ್ದರು. ಆದರೆ, ಕುಟುಂಬದ ಸದಸ್ಯರೊಬ್ಬರ ಕಿಡ್ನಿ ಕಸಿ ಮಾಡಿದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗುವ ಸಾಧ್ಯತೆ ಹೆಚ್ಚಿದ್ದರಿಂದ ಮಗಳ ಒತ್ತಾಯಕ್ಕೆ ಮಣಿದು ಲಾಲು ಒಪ್ಪಿದ್ದರು. ಶಸ್ತ್ರಚಿಕಿತ್ಸೆಗಾಗಿ ಲಾಲು ಸಿಂಗಾಪುರಕ್ಕೆ ತೆರಳಿದ್ದರು. ಈಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ತಂದೆ - ಮಗಳು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.